ಭಾನುವಾರ, ಆಗಸ್ಟ್ 1, 2021
27 °C
ಸಂಪರ್ಕಿತರು, ಹೊರ ರಾಜ್ಯಗಳಿಂದ ಬಂದವರು ಮನೆ ಕ್ವಾರಂಟೈನ್‌ನಲ್ಲಿರುವುದು ಕಡ್ಡಾಯ– ಜಿಲ್ಲಾಧಿಕಾರಿ

ನಿಯಮ ಉಲ್ಲಂಘನೆ: 14 ಮಂದಿ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಮನೆ ಕ್ವಾರೆಂಟೈನ್‌ನಲ್ಲಿರಬೇಕಾದವರು ನಿಗದಿತ ಅವಧಿಯ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಬಂದು ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಎಫ್ಐಆರ್‌ ದಾಖಲಿಸಲಾವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿದ 14 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. 

ಕೋವಿಡ್-19 ಸೋಂಕು ದೃಢೀಕೃತ ಪ್ರಕರಣಗಳಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರೆಂದು ಗುರುತಿಸಿಕೊಂಡವರು, ಅಂತರರಾಜ್ಯ, ದೇಶಿಯ ಪ್ರಯಾಣಿಕರು ಸೂಚಿಸಲಾದ ಅವಧಿಯವರೆಗೆ ಮನೆ ಕ್ವಾರಂಟೈನ್‌ನಲ್ಲಿ ಇರಬೇಕಾದದ್ದು ಕಡ್ಡಾಯ. ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆ, ಕೋವಿಡ್ ಕೇರ್ ಕೇಂದ್ರಗಳಿಂದ ಬಿಡುಗಡೆಯಾದವರೂ ವೈದ್ಯರು ಸೂಚಿಸಿದ ದಿನಗಳವರೆಗೆ ಕಡ್ಡಾಯವಾಗಿ ಮನೆಯಲ್ಲಿಯೇ ಕ್ವಾರಂಟೈನ್‍ ಆಗಬೇಕು. ಆದರೆ, ಜಿಲ್ಲೆಯಲ್ಲಿ ಇತ್ತೀಚೆಗೆ ಮನೆ ಕ್ವಾರೆಂಟೈನ್ ನಿಗಾವಣೆ ಉಲ್ಲಂಘಿಸುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ. 

ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದವರಿಗೆ ಎಚ್ಚರಿಕೆ ನೀಡಲಾಗುವುದು. ಎರಡನೇ ಬಾರಿ ನಿಯಮ ಉಲ್ಲಂಘಿಸಿದಲ್ಲಿ ಅವರನ್ನು ಕರೆತಂದು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿ ಇರಿಸಲಾಗುವುದು. ಮೂರನೇ ಬಾರಿಗೆ ನಿಯಮ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಾ.ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು