ಸೋಮವಾರ, ಆಗಸ್ಟ್ 8, 2022
21 °C

ಟ್ರಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಜೋಳದ ಕಡ್ಡಿ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಜೋಳದ ಕಡ್ಡಿ ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಜೋಳದ ಕಡ್ಡಿ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ಚಾಲಕ ಮಸಣನಾಯಕ ಅವರು ಗುಂಡೇಗಾಲ ಗ್ರಾಮದ ರೈತ ರಿಂದ ₹ 10 ಸಾವಿರಕ್ಕೆ ಜೋಳದ ಕಡ್ಡಿ ಖರೀದಿಸಿ ಟ್ರಾಕ್ಟರ್‌ನಲ್ಲಿ ತುಂಬಿಕೊಂಡು ಪಾಳ್ಯಕ್ಕೆ ಬರುತ್ತಿದ್ದರು.

ಗ್ರಾಮದ ಬಸ್ ನಿಲ್ದಾಣದ ಬಳಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಜೋಳದ ಕಡ್ಡಿಗೆ ತಗುಲಿ ಬೆಂಕಿ ಹೊತ್ತಿ ಉರಿಯಲು ಆರಂಭವಾಯಿತು. ಇದನ್ನು ಗಮನಿಸಿದ ಚಾಲಕ ವೇಗವಾಗಿ ಚಾಲನೆ ಮಾಡಿ ಗ್ರಾಮದ ಹೊರಭಾಗದಲ್ಲಿ ಟ್ರಾಕ್ಟರ್ ನಿಲ್ಲಿಸಿ ಕಡ್ಡಿಯನ್ನು ನೆಲಕ್ಕುರುಳಿಸಿದನು ವಾಹನಕ್ಕೆ ಮತ್ತು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು