ಮಹದೇಶ್ವರ ಬೆಟ್ಟ: ಇಲ್ಲಿನ ಅಂತರಗಂಗೆ ಬಳಿ ನಿರ್ಮಿಸಿರುವ, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಮಳಿಗೆಗಳಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಹನುಮಂತು ಎಂಬುವವರು ಗುತ್ತಿಗೆಗೆ ಪಡೆದಿದ್ದ ಮೂರು ಮಳಿಗೆಗಳು ಬೆಂಕಿಗೆ ಆಹುತಿಯಾಗಿದೆ. ಮಾರಾಟಕ್ಕೆ ಇಟ್ಟಿದ್ದ ಬಟ್ಟೆಗಳು ಸೇರಿದಂತೆ ಎಲ್ಲ ವಸ್ತುಗಳು ಸುಟ್ಟುಕರಕಲಾಗಿದೆ.
ಅಂತರಗಂಗೆ ಬಳಿ ನಿರ್ಮಾಣ ಮಾಡಿರುವ ಮಳಿಗೆಗಳು ತಗಡಿನಿಂದ ನಿರ್ಮಿಸಲಾಗಿದ್ದು, ಬೆಂಕಿಗಾಹುತಿಯಾಗಿರುವ ಮಳಿಗೆಯ ಹಿಂದೆ ಕಸದ ರಾಶಿ ಇತ್ತು.
ಕಸಕ್ಕೆ ಹಾಕಿದ ಬೆಂಕಿ, ಮಳಿಗೆಯ ಒಳಭಾಗದಲ್ಲಿ ಹಾಕಲಾಗಿದ್ದ ಬಟ್ಟೆಗೆ ತಗುಲಿ ಅನಾಹುತ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.