ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ: ಇಬ್ಬರ ವಿರುದ್ಧ ಪ್ರಕರಣ

Published 12 ಫೆಬ್ರುವರಿ 2024, 15:56 IST
Last Updated 12 ಫೆಬ್ರುವರಿ 2024, 15:56 IST
ಅಕ್ಷರ ಗಾತ್ರ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಪೋಡಿನ ಮೊದಲ ಮಾವು ದಿಂಬದ ಬಳಿ ಸೋಮವಾರ ಮಧ್ಯಾಹ್ನ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಬುಡಕಟ್ಟು ಜನರ ಸಹಭಾಗಿತ್ವದಲ್ಲಿ ಬೆಂಕಿಯನ್ನು ನಂದಿಸಲಾಗಿದೆ. 

ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. 

ಎರಡು ಎಕರೆಯಷ್ಟು ಅರಣ್ಯ ಸುಟ್ಟುಹೋಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

‘ಈಚಿನ ದಿನಗಳಲ್ಲಿ ಕಿಡಿಗೇಡಿಗಳ ಕೃತ್ಯದಿಂದ ಕಾಳ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ಅನಧಿಕೃತವಾಗಿ ಸಂಚರಿಸಿ, ಕಾಡಿಗೆ ಬೆಂಕಿ ಹಾಕಿದವರನ್ನು ಸಿಬ್ಬಂದಿ ಗುರುತಿಸಿದ್ದಾರೆ. ಈ ಸಂಬಂಧ ಇಬ್ಬರ ಮೇಲೆ ದೂರು ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ’ ಎಂದು ಆರ್‌ಎಫ್‌ಒ ನಾಗೇಂದ್ರ ನಾಯಕ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT