ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ವನ್ಯಧಾಮದಲ್ಲಿ ಬೆಂಕಿ: 15 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶ

Published 6 ಏಪ್ರಿಲ್ 2024, 15:46 IST
Last Updated 6 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂ ಅರಣ್ಯ ವಲಯ ವ್ಯಾಪ್ತಿಯ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಈ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿ ನಂದಿಸಲು ಮುಂದಾದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

ಈ ಬಗ್ಗೆ ಕಾವೇರಿ ವನ್ಯಧಾಮದ ಎಸಿಎಫ್ ಅಂಕರಾಜು ಪ್ರತಿಕ್ರಿಹಿಸಿ, ಮೈಲುಮಲೈ ಅರಣ್ಯಪ್ರದೇಶ ಬೇಸಿಗೆಯಲ್ಲೂ ಅಚ್ಚಹಸಿರಿನಿಂದ ಕೂಡಿರುವ ಪ್ರದೇಶವಾಗಿದೆ. ಈ ಭಾಗದಲ್ಲಿ ಏಳು ವರ್ಷಗಳ ನಂತರ ಬೆಂಕಿ ಬಿದಿದ್ದು. ಈಗಾಗಲೇ ಬೆಂಕಿಯನ್ನು‌‌ನಂದಿಸಲು‌ ನಮ್ಮ‌ ಸಿಬ್ಬಂದಿ ಸಫಲರಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ 20ಕ್ಕೂ ಸಿಬ್ಬಂದಿ ಅರಣ್ಯ ಪ್ರದೇಶದಲ್ಲೇ ಬೀಡು ಬಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT