ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ ಅರಣ್ಯ ಸಿಬ್ಬಂದಿ, ಬೇಟೆಗಾರರ ಗುಂಡಿನ ಚಕಮಕಿ: ಗುಂಡ್ಲುಪೇಟೆ ಯುವಕ ಸಾವು

ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಶನಿವಾರ ತಡರಾತ್ರಿ ಕಡವೆ ಬೇಟೆಯಾಡಲು ಹೋಗಿದ್ದ ಯುವಕರು
Published 5 ನವೆಂಬರ್ 2023, 7:06 IST
Last Updated 5 ನವೆಂಬರ್ 2023, 9:46 IST
ಅಕ್ಷರ ಗಾತ್ರ

ಬಂಡೀಪುರ: ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಶನಿವಾರ ತಡರಾತ್ರಿ ಕಡವೆ ಬೇಟೆಯಾಡಿದ ತಂಡ ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರ ತಂಡದಲ್ಲಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ.

ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ನಿವಾಸಿ ಮನು (27) ಮೃತಪಟ್ಟ ಯುವಕ.

ಬಂದೂಕು ಹಾಗೂ ಇತರೆ ಶಸ್ತ್ರಾಸ್ತ್ರ ಹೊಂದಿದ್ದ 10 ಮಂದಿಯ ತಂಡ ಕಡವೆಯನ್ನು ಗುಂಡಿಕ್ಕಿ ಬೇಟೆಯಾಡಿದೆ.

ಕಾರ್ಯಾಚರಣೆ ಆರಂಭಿಸಿದ ಗಸ್ತಿನಲ್ಲಿದ್ದ ಸಿಬ್ಬಂದಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ, ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರೂ, ಬೇಟೆಗಾರರು ಗುಂಡಿನ ದಾಳಿ ನಡೆಸಿದರು. ಅತ್ಮರಕ್ಷಣೆಗಾಗಿ ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ತಂಡದಲ್ಲಿದ್ದ ಮನುವಿಗೆ ಗುಂಡು ತಗುಲಿದೆ ಎಂದು ಮೂಲಗಳು ತಿಳಿಸಿವೆ.

ಉಳಿದ ಬೇಟೆಗಾರರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್.ಪಿ ಪದ್ಮಿನಿ ಸಾಹು ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

120 ಕೆಜಿ ಕಡವೆ ಮಾಂಸ, ಒಂದು ಸಿಂಗಲ್ ಬ್ಯಾರೆಲ್ ಗನ್ ಇತರೆ ಆಯುಧಗಳನ್ನು ವಶಕ್ಕೆ ಪಡೆಯಲಾಗಿದ್ದು, ಪರಾರಿಯಾದವರ ಬಂಧನಕ್ಕೆ ಶೋಧ ಕಾರ್ಯ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT