ಗ್ರಾಮದ ಮಹಾದೇವಸ್ವಾಮಿ ಎಂಬುವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, 5 ತೆಂಗಿನ ಸಸಿಗಳು ಮತ್ತು ಪೈಪ್‌ಲೈನ್ ತುಳಿದು ಹಾಕಿವೆ. ವೆಂಕಟರಾಮಯ್ಯ ಎಂಬ ರೈತನ ಜಮೀನಿನಲ್ಲಿ ಟೊಮೆಟೊ ಹಾಗೂ ಚನ್ನನಾಯಕ ಎಂಬುವರ ಜಮೀನಿನಲ್ಲಿದ್ದ ಬೋರ್‌ವೆಲ್ ಮತ್ತು ಇತರೆ ಕೃಷಿ ಉಪಕರಣ ತುಳಿದು ನಾಶಪಡಿಸಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.