ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಆರ್‌ಟಿ: 50 ಎಕರೆಗೂ ಹೆಚ್ಚು ಎಕರೆ ಕಾಡು ಭಸ್ಮ

Published 5 ಮಾರ್ಚ್ 2024, 5:08 IST
Last Updated 5 ಮಾರ್ಚ್ 2024, 5:08 IST
ಅಕ್ಷರ ಗಾತ್ರ

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಳ್ಗಿಚ್ಚಿನಿಂದ 50 ಎಕರೆಗೂ ಹೆಚ್ಚು ಕಾಡು ಸುಟ್ಟಿದೆ. 

‘ಪುಣಜನೂರಿನಿಂದ ಬೇಡಗುಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ವ್ಯಾಪ್ತಿಯ ಕುರಿಮಂದೆ, ಬಜೆಬಾವಿ ಪ್ರದೇಶದ ಮೂರು ಕಡೆ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಎರಡು ಕಡೆ ಬೆಂಕಿ ಆರಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೊಂದು ಕಡೆ ಬೆಂಕಿ ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 

‘ಬೆಳಿಗ್ಗೆಯೇ ಬೆಂಕಿ ಹೊತ್ತಿಕೊಂಡಿತ್ತು. ಸಂಜೆಯಾದರೂ ನಂದಿಸಲು ಸಾಧ್ಯವಾಗಿಲ್ಲ. ಬಿಸಿಲಿನಿಂದಾಗಿ ಕಾಡು ಒಣಗಿದ್ದು, ಬೆಂಕಿ ವೇಗವಾಗಿ ಹರಡುತ್ತಿದೆ. ಕನಿಷ್ಠ 50 ಎಕರೆ ಬೆಂಕಿಗೆ ಆಹುತಿಯಾಗಿದೆ’ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ‘ನೂರಾರು ಎಕರೆ ಭಸ್ಮವಾಗಿದೆ’ ಎಂದು ಪುಣಜನೂರಿನ ನಿವಾಸಿಗಳು ಹೇಳುತ್ತಿದ್ದಾರೆ. 

ಕೋರ್‌ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿರುವುದರಿಂದ ಅಂದಾಜು ಸಿಗುತ್ತಿಲ್ಲ. ಆದರೆ, ದಟ್ಟ ಹೊಗೆ, ಬೆಂಕಿ ದೂರದಿಂದಲೇ ಕಾಣಿಸುತ್ತಿತ್ತು.  

ಈ ಬಗ್ಗೆ ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್‌ ದೀಪ್‌ ಜೆ.ಕಾಂಟ್ರ್ಯಾಕ್ಟರ್‌, ‘ಕನಿಷ್ಠ 50 ಎಕರೆ ಸುಟ್ಟಿರಬಹುದು. ನೆಲ ಬೆಂಕಿಯಾಗಿದ್ದು, ಎತ್ತರಕ್ಕೆ ವ್ಯಾಪಿಸಿಲ್ಲ. ಬೆಂಕಿ ನಂದಿಸಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯರೇ ಬೆಂಕಿ ಹಾಕಿರುವ ಅನುಮಾನವಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು. 

ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ ಬಿದ್ದಿರುವ ಜಾಗದಲ್ಲಿ ದಟ್ಟ ಹೊಗೆ ಆವರಿಸಿರುವುದು
ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ ಬಿದ್ದಿರುವ ಜಾಗದಲ್ಲಿ ದಟ್ಟ ಹೊಗೆ ಆವರಿಸಿರುವುದು
ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ ಬಿದ್ದಿರುವ ಜಾಗದಲ್ಲಿ ದಟ್ಟ ಹೊಗೆ ಆವರಿಸಿರುವುದು
ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ ಬಿದ್ದಿರುವ ಜಾಗದಲ್ಲಿ ದಟ್ಟ ಹೊಗೆ ಆವರಿಸಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT