ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಶಾಲೆಯಲ್ಲಿ ಮಂತ್ರಿ ಮಂಡಲ ರಚನೆ

Published 27 ಜೂನ್ 2023, 13:45 IST
Last Updated 27 ಜೂನ್ 2023, 13:45 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ದೇಶಿಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂತ್ರಿ ಮಂಡಲವನ್ನು ಚುನಾವಣೆ ನಡೆಸುವ ಮೂಲಕ ರಚನೆ ಮಾಡಲಾಯಿತು.

ಅಭ್ಯರ್ಥಿಗಳು ವಿವಿಧ ಚಿಹ್ನೆಗಳನ್ನು ಹೊಂದಿದ್ದು, ತಮ್ಮ ಪರ ಮತ ಚಲಾಯಿಸುವಂತೆ ವಿದ್ಯಾರ್ಥಿಗಳಿಗೆ ವಿನಂತಿಸಿಕೊಂಡಿದ್ದರು. ಗೋಪ್ಯ ಮತದಾನದ ಮೂಲಕ ಶಾಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ, ಆಧಾರ್ ಕಾರ್ಡ್ ತೋರಿಸಿ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಚುನಾವಣೆಯ ಪ್ರಕ್ರಿಯೆಗಳಂತೆ ಶಾಲೆಯಲ್ಲೂ ಮಾದರಿ ಚುನಾವಣೆ ನಡೆಸಿ ಮಕ್ಕಳಲ್ಲಿ ಚುನಾವಣೆ ಗೋಪ್ಯತೆ ಮತ್ತು ಮತದಾನದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಯಿತು. ಹಾಗೆಯೇ ಅಭ್ಯರ್ಥಿಗಳಿಗೆ ಎದುರಿಗೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು.

ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು ಹಾಗೂ ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ನೂತನ ಸದಸ್ಯರಿಗೆ ಸಹಶಿಕ್ಷಕ ನಂದೀಶ್ ಪ್ರತಿಜ್ಞಾವಿಧಿ ಬೋಧಿಸಿದರು. ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಶಿಕ್ಷಕರಾದ ಪುಟ್ಟಬುದ್ದಿ, ನಂದೀಶ್, ನಾಗಮ್ಮ ಪವಿತ್ರ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT