ಸಂತೇಮರಹಳ್ಳಿ: ‘ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ತಿಳಿಸಿದರು.

ಇಲ್ಲಿ ಕೊಳ್ಳೇಗಾಲ ಗ್ರಾಮಾಂತರ ಮಂಡಲ ವತಿಯಿಂದ ಮಂಗಳವಾರ ನಡೆದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದರು.

‘ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಬೂತ್ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಪಕ್ಷ ಸಂಘಟನೆ ಸಂಬಂಧ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಪಕ್ಷದ ಸಭೆಗಳನ್ನು ಹೆಚ್ಚು ಆಯೋಜನೆ ಮಾಡುವ ಮೂಲಕ ಸಂಘಟನೆಗೆ ಹೆಚ್ಚು ಬಲ ನೀಡಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

ಕೊಳ್ಳೇಗಾಲ ಗ್ರಾಮಾಂತರ ಮಂಡಲ ಉಸ್ತುವಾರಿ ಡಾ.ಎ.ಆರ್.ಬಾಬು, ಕೊಳ್ಳೇಗಾಲ ಗ್ರಾಮಾಂತರ ಮಂಡಲ ಅಧ್ಯಕ್ಷ ಕಾವುದವಾಡಿ ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಟಗರಪುರ ರೇವಣ್ಣ, ಕೊಳ್ಳೇಗಾಲ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜುನಾಯ್ಕ, ನಂದೀಶ್, ಎಪಿಎಂಸಿ ನಿರ್ದೇಶಕಿ ಕಲಾವತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.