ಗುರುವಾರ , ಸೆಪ್ಟೆಂಬರ್ 23, 2021
27 °C

ಯುವಕನ ಮೇಲೆ ಹಲ್ಲೆ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಸೋಮವಾರ ರಾತ್ರಿ ನಾಲ್ವರು ಯುವಕರು ಮತ್ತೊಬ್ಬ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಯುವಕ ತೀವ್ರವಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ.  

ಹಲ್ಲೆ ಮಾಡಿರುವ ನಾಲ್ವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

ಗಾಯಗೊಂಡವನ್ನು ನಗರದ ಅಂಬೇಡ್ಕರ್‌ ಬಡಾವಣೆ ನಿವಾಸಿ ಪ್ರೀತಂ ಎಂದು ಗುರುತಿಸಲಾಗಿದೆ. ಬಾಬು ಜಗಜೀವನ ರಾಂ ಬಡಾವಣೆಯವರಾದ ನಂದನ್‌, ವಿಜಯ್‌ಕುಮಾರ್‌, ಅಭಿಷೇಕ್, ಸುನಿಲ್‌ ಕುಮಾರ್‌ ಅವರು ಬಂಧಿತರು.

‘ಐವರು ಸ್ನೇಹಿತರು. ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಾನಮತ್ತರಾಗಿದ್ದ ಇವರ ನಡುವೆ ಜಗಳವಾಗಿದೆ. ಈ ಸಂದರ್ಭದಲ್ಲಿ ನಾಲ್ವರು ಪ್ರೀತಂನ ತಲೆ, ಕೈಗೆಲ್ಲ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಯುವಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೈಸೂರಿಗೆ ಕರೆದೊಯ್ಯಲಾಗಿತ್ತು. ಘಟನೆ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ಮಂಗಳವಾರ ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇವೆ. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ’ ಎಂದು ಚಾಮರಾಜನಗರ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ಮಹೇಶ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

‘ಪ್ರೀತಂಗೆ ಗಂಭೀರ ಗಾಯಗಳಾಗಿವೆ. ಆದರೆ, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದ ಆತ ನಮಗೆ ಹೇಳಿಕೆಯನ್ನೂ ನೀಡಿದ್ದಾನೆ’ ಎಂದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು