ಮಂಗಳವಾರ, ಡಿಸೆಂಬರ್ 1, 2020
18 °C

ಚಾಮರಾಜನಗರ: ನಾಲ್ಕು ಮಂದಿಗೆ ಸೋಂಕು, 77ಕ್ಕೆ ಇಳಿದ ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 77 ಕ್ಕೆ ಕುಸಿದಿದೆ. ಗುರುವಾರ ಹೊಸದಾಗಿ ನಾಲ್ಕು ಪ್ರಕರಣಗಳು ವರದಿಯಾಗಿದ್ದು‌, 18 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ. 

ಜೂನ್‌ ತಿಂಗಳಲ್ಲಿ ಕೋವಿಡ್‌ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾದ ನಂತರ, ಒಂದು ದಿನದಲ್ಲಿ ಇಷ್ಟು ಕಡಿಮೆ ಪ್ರಮಾಣದಲ್ಲಿ ಸೋಂಕು ದೃಢಪಡುತ್ತಿರುವುದು ಇದೇ ಮೊದಲು. 

ಗುರುವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 6,208 ಪ್ರಕರಣಗಳು ದೃಢಪಟ್ಟಿವೆ. ಗುಣಮುಖರಾದವರ ಸಂಖ್ಯೆ 6004ಕ್ಕೆ ಏರಿದೆ. 108 ಮಂದಿ ಕೋವಿಡ್‌ನಿಂದ ಹಾಗೂ ಬೇರೆ ಕಾರಣಗಳಿಂದ 19 ಮಂದಿ ಮೃತಪಟ್ಟಿದ್ದಾರೆ. 

ಸದ್ಯ ಚಿಕಿತ್ಸೆ ಪಡೆಯುತ್ತಿರುವ 77 ಸೋಂಕಿತರ ಪೈಕಿ 44 ಮಂದಿ ಮನೆಯಲ್ಲೇ ಇದ್ದಾರೆ. ಐಸಿಯುನಲ್ಲಿ ಇರುವವರ ಸಂಖ್ಯೆಯೂ ಗಣನೀಯವಾಗಿ ಇಳಿದಿದ್ದು, ಈಗ ಕೇವಲ ನಾಲ್ಕು ಮಂದಿ ಇದ್ದಾರೆ. 

ಒಂದೇ ದಿನ ದಾಖಲೆಯ 1,703 ಕೋವಿಡ್‌ ಪರೀಕ್ಷೆಗಳ ವರದಿ ಬಂದಿದ್ದು, 1,699 ಮಂದಿಯ ವರದಿ ನೆಗೆಟಿವ್‌ ಬಂದಿದೆ. ದೃಢ ಪಟ್ಟ ನಾಲ್ಕು ಪ್ರಕರಣಗಳ ಪೈಕಿ ಚಾಮರಾಜನಗರ ತಾಲ್ಲೂಕಿನ ಮೂರು ಹಾಗೂ ಹನೂರು ತಾಲ್ಲೂಕಿನ ಒಂದು ಪ್ರಕರಣಗಳು ಸೇರಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು