ಸೋಮವಾರ, ಅಕ್ಟೋಬರ್ 26, 2020
21 °C
4,000 ಸನಿಹಕ್ಕೆ ಪ್ರಕರಣಗಳು, 3,205 ಮಂದಿ ಗುಣಮುಖ

ನಾಲ್ವರು ಸಾವು, 99 ಹೊಸ ಪ‍್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 28 ಮಂದಿ ನಿಧನರಾಗಿದ್ದಾರೆ. 

ಚಾಮರಾಜನಗರ ತಾಲ್ಲೂಕು ಕಾಳನಹುಂಡಿ ಗ್ರಾಮದ ನಿವಾಸಿ 60 ವರ್ಷದ ಸೆ.25ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಮೃತಪಟ್ಟಿದ್ದಾರೆ. 

ಗುಂಡ್ಲುಪೇಟೆಯ ನಿವಾಸಿ 80 ವರ್ಷದ ಮಹಿಳೆ ಸೆ.9ರಂದು ದಾಖಲಾಗಿದ್ದರು. ಸೋಮವಾರ ನಿಧನರಾಗಿದ್ದಾರೆ. ಹನೂರು ತಾಲ್ಲೂಕಿನ ಬಂಡಳ್ಳಿಯ 55 ವರ್ಷದ ಪುರುಷ 22ರಂದು ದಾಖಲಾಗಿದ್ದರು. ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಯಳಂದೂರು ಪಟ್ಟಣದ 52ರ ವರ್ಷದ ವ್ಯಕ್ತಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. 

ಮಂಗಳವಾರ 99 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. 59 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 3,985 ಪ್ರಕರಣಗಳು ವರದಿಯಾಗಿವೆ. 3,205 ಮಂದಿ ಗುಣಮುಖರಾಗಿದ್ದಾರೆ. 687 ಮಂದಿ ಸಕ್ರಿಯ ಪ್ರಕರಣಗಳಿವೆ. 314 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 38 ಮಂದಿ ಐಸಿಯುನಲ್ಲಿ ಇದ್ದಾರೆ. 

ಮಂಗಳವಾರ 1,037 ಮಂದಿಯ ಗಂಟಲು ಮಾದರಿ ದ್ರವಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 943 ಮಂದಿಯ ವರದಿ ನೆಗೆಟಿವ್‌ ಬಂದಿವೆ. 94 ಮಂದಿಗೆ ಸೋಂಕು ಖಚಿತವಾಗಿದೆ. ಐದು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು