ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 4 ಹೊಸ ಕೋವಿಡ್‌ ಪ್ರಕರಣ,. ಒಬ್ಬರು ಗುಣಮುಖ

Last Updated 19 ಜನವರಿ 2021, 16:34 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ನಾಲ್ಕು ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಒಬ್ಬರು ಗುಣಮುಖರಾಗಿದ್ದಾರೆ. 34 ಸಕ್ರಿಯ ಪ್ರಕರಣಗಳಿವೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಪೈಕಿ 23 ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,866ಕ್ಕೆ ಏರಿದೆ. 6,702 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಸೋಂಕಿನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಮಂಗಳವಾರ 1,107 ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,104 ವರದಿಗಳು ನೆಗೆಟಿವ್‌ ಬಂದಿವೆ. ಮೂರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT