ಶುಕ್ರವಾರ, ನವೆಂಬರ್ 27, 2020
18 °C

ಚಾಮರಾಜನಗರ: ಎರಡು ದಿನಗಳಲ್ಲಿ 45 ಪ್ರಕರಣ, 78 ಮಂದಿ ಸೋಂಕು ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಎರಡು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 45 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 78 ಮಂದಿ ಸೋಂಕು ಮುಕ್ತರಾಗಿದ್ದಾರೆ. ಮೂರು ಸಾವಿನ ಪ್ರಕರಣ ವರದಿಯಾಗಿದೆ. 

ಭಾನುವಾರ 27 ಮಂದಿಗೆ ಸೋಂಕು ತಗುಲಿದ್ದರೆ, 30 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಕೇವಲ ಪ್ರಕರಣಗಳು ದೃಢಪಟ್ಟಿವೆ. 48 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪ‍ಟ್ಟಿದ್ದಾರೆ. 

ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ನಿಂದಾಗಿ 103 ಮಂದಿ, ಕೋವಿಡ್‌ಯೇತರ ಕಾರಣದಿಂದ 19 ಜನರು ಮೃತಪಟ್ಟಿದ್ದಾರೆ. 

ಸಕ್ರಿಯ ಪ್ರಕರಣ ಇಳಿಕೆ: ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖವಾಗಿದ್ದು, ಸದ್ಯ 284 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 128 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿರುವವರ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಸದ್ಯ 23 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಎರಡು ದಿನಗಳ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವೆಗೆ 5,798 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 5,392 ಮಂದಿ ಗುಣಮುಖರಾಗಿದ್ದಾರೆ. 

ಭಾನುವಾರ ಜಿಲ್ಲೆಯಲ್ಲಿ 1,021 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 994 ಮಂದಿಯ ವರದಿ ನೆಗೆಟಿವ್‌ ಬಂದಿವೆ. ಸೋಮವಾರ 642 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 624 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು