ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 42 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 59 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಯೇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಯಳಂದೂರು ನಿವಾಸಿ 58 ವರ್ಷದ ವ್ಯಕ್ತಿಯೊಬ್ಬರು ಸೆ.19ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಮೃತಪಟ್ಟಿದ್ದಾರೆ. ನಂತರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಯೇತರ ಕಾರಣದಿಂದ ಮೃತಪಟ್ಟ ಸೋಂಕಿತರ ಸಂಖ್ಯೆ 24ಕ್ಕೆ ಏರಿದೆ. ಕೋವಿಡ್ ಸೋಂಕಿನಿಂದಾಗಿ ಈವರೆಗೆ 55 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 3,583ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 2,909ಕ್ಕೆ ತಲುಪಿದೆ. 596 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 275 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 24 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ 640 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್ಟಿಪಿಸಿಆರ್ನಲ್ಲಿ 422, ರ್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ 178 ಟ್ರುನಾಟ್ನಲ್ಲಿ 40 ಪರೀಕ್ಷೆಗಳನ್ನು ನಡೆಸಲಾಗಿದೆ. 599 ಮಂದಿಯ ವರದಿ ನೆಗೆಟಿವ್ ಬಂದಿದೆ. 41 ಮಂದಿಗೆ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ಖಚಿತವಾಗಿದೆ.

42 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 45, ಕೊಳ್ಳೇಗಾಲದ ಏಳು, ಯಳಂದೂರಿನ ಐವರು, ಗುಂಡ್ಲುಪೇಟೆಯ ನಾಲ್ವರು ಹಾಗೂ ಹನೂರಿನ ಒಬ್ಬರು ಇದ್ದಾರೆ.

ಗುಣಮುಖರಾದ 59 ಜನರಲ್ಲಿ ಕೊಳ್ಳೇಗಾಲ ತಾಲ್ಲೂಕಿನ 23, ಚಾಮರಾಜನಗರದ 12, ಗುಂಡ್ಲುಪೇಟೆಯ 11, ಹನೂರಿನ ಒಂಬತ್ತು, ಯಳಂದೂರಿನ ಮೂವರು ಹಾಗೂ ಹೊರ ಜಿಲ್ಲೆಯ ಒಬ್ಬರು ಇದ್ದಾರೆ.

49,414 ಮಂದಿ ಮೇಲೆ ನಿಗಾ: ಸೋಂಕಿತರ ಪ್ರಾಥಮಿಕ ಸಂಪರ್ಕಿತರು 23,299, ದ್ವಿತೀಯ ಸಂಪರ್ಕಿತರು 26,113 ಮಂದಿ ಸೇರಿದಂತೆ 49,414 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದು, ಅವರ ಆರೋಗ್ಯದ ಮೇಲೆ ಜಿಲ್ಲಾಡಳಿತ ನಿಗಾ ಇರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.