ಶುಕ್ರವಾರ, ಜನವರಿ 27, 2023
20 °C
ಡಾ.ಬಾಬು ನೇತೃತ್ವದಲ್ಲಿ ಮಾದಾಪುರದಲ್ಲಿ ಕಣ್ಣಿನ ಉಚಿತ ಕಣ್ಣಿನ ತಪಾಸಣೆ ಶಿಬಿರ

405 ಮಂದಿ ಭಾಗಿ, 40 ಜನರಿಗೆ ಶಸ್ತ್ರಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಮೈಸೂರಿನ  ಜೆಎಸ್‌ಎಸ್ ಆಸ್ಪತ್ರೆ, ನಗರದ ಡಾ.ಬಾಬು ಸೋಷಿಯಲ್ ವೆಲ್‌ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ ಮತ್ತು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ಶನಿವಾರ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಶಿಬಿರದಲ್ಲಿ 405 ಮಂದಿ ಭಾಗವಹಿಸಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಈ ಪೈಕಿ ಕಣ್ಣಿನ ಪೊರೆಯುಳ್ಳ 40 ಮಂದಿಯನ್ನು ಶಸ್ತ್ರಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ  ಕರೆದೊಯ್ಯಲಾಯಿತು.

ಇದಕ್ಕೂ ಮೊದಲು ನಡೆದ ಸಮಾರಂಭದಲ್ಲಿ ದಲಿತ ಮಹಾಸಭಾದ ರಾಜ್ಯಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಶಿಬಿರಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಡಾ.ಎ.ಆರ್‌.ಬಾಬು ಅವರು ವೈದ್ಯರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜದ ಆರೋಗ್ಯ ರಕ್ಷಣೆಯಲ್ಲಿಯೂ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 30 ವರ್ಷಗಳಿಂದ ವೈದ್ಯರಾಗಿ ಉತ್ತಮ ಸೇವೆಯನ್ನು ನೀಡುತ್ತಿದ್ದಾರೆ’ ಎಂದರು. 

ಈಗ ಬಾಬು ಅವರು ಸೇವಾ ಟ್ರಸ್ಟ್  ಮೂಲಕ ಹಳ್ಳಿ ಹಳ್ಳಿಗಳಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ ಈ ಭಾಗದಲ್ಲಿ ಜನಾನುರಾಗಿಯಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೂ ಉಚಿತವಾಗಿ ನೋಟ್ ಬುಕ್ ಗಳನ್ನು  ನೀಡಿ ಸೇವಾ ಕಾಳಜಿ ಮೆರೆಯುತ್ತಿದ್ದಾರೆ. ಇಂಥವರಿಗೆ ರಾಜಕೀಯ ಅಧಿಕಾರ ದೊರೆತರೆ ಇನ್ನೂ ಹೆಚ್ಚಿನ ಸೇವೆಗಳು ಜನರಿಗೆ ದೊರೆಯಲಿದೆ’ ಎಂದರು. 

ಟ್ರಸ್ಟ್‌ ಅಧ್ಯಕ್ಷ ಡಾ.ಎ.ಆರ್‌.ಬಾಬು ಮಾತನಾಡಿ, ‘ಚಾಮರಾಜನಗರದಲ್ಲಿ ಜೆಎಸ್‌ಎಸ್ ಅಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ, ಮತ್ತು ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ. ನಾನು ಕೂಡ ಸರ್ಕಾರಿ ಶಾಲೆಯಲ್ಲಿ ಓದಿ ವೈದ್ಯನಾಗಿದ್ದೇನೆ. ವೈದ್ಯಕೀಯ ಸೇವೆ ಸಲ್ಲಿಸುವ ಜೊತೆಗೆ ಟ್ರಸ್ಟ್ ಮೂಲಕ  ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕಣ್ಣಿನ ಉಚಿತ ತಪಾಸಣೆ ಶಿಬಿರಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ’ ಎಂದರು.

ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಸನ್ಮಕುಮಾರಿ, ಸದಸ್ಯರಾದ ತಾಯಮ್ಮ, ಮಂಜುನಾಥ್, ಮುಖಂಡರಾದ ಬಸವಣ್ಣ, ನಟರಾಜು, ಬಿಜೆಪಿ ಮಂಡಲದ ಅಧ್ಯಕ್ಷ ಬಸವಣ್ಣ, ಮಂಗಲ ಗ್ರಾಮ ಪಂಚಾಯಿತಿ ಸದಸ್ಯ ನಾಗಶೆಟ್ಟಿ, ಮುಖಂಡರಾದ ಭೋಗಾಪುರ ಜಿ.ಕುಮಾರಸ್ವಾಮಿ, ಜಯರಾಮಶೆಟ್ಟಿ, ಮಹೇಶ್ ಮರಿಯಾಲ, ಮಾದಾಪುರ ರವಿಕುಮಾರ್, ಯಲಕ್ಕೂರು ಲಿಂಗರಾಜು ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು