ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಜೂನ್‌ 20ರಂದು ಉಚಿತ ಸಾಮೂಹಿಕ ವಿವಾಹ

Last Updated 19 ಮೇ 2022, 10:49 IST
ಅಕ್ಷರ ಗಾತ್ರ

ಚಾಮರಾಜನಗರ: ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಜೂನ್ 20ರಂದು ಹಮ್ಮಿಕೊಳ್ಳಲಾಗಿದೆ.

ಸಾಮೂಹಿಕ ವಿವಾಹ ಶುಭ ಕಾರ್ಯದಲ್ಲಿ ಮದುವೆಯಾಗಲು ವರನ ವಯಸ್ಸು 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ವಯಸ್ಸಿನ ಬಗ್ಗೆ ಶಾಲಾ ದಾಖಲಾತಿ ಪತ್ರ ಅಥವಾ ಮೂಳೆ ತಜ್ಞರಿಂದ ಪಡೆದ ದೃಢೀಕರಣ ಪತ್ರ ಸಲ್ಲಿಸಬೇಕು. ವರ ಮತ್ತು ವಧುವಿನ ಭಾವಚಿತ್ರ, ತಹಶೀಲ್ದಾರ್ ಅವರಿಂದ ಪಡೆದ ಜಾತಿ ದೃಢೀಕರಣ ಪತ್ರ ಸಲ್ಲಿಸಬೇಕು. ಬಾಲ್ಯವಿವಾಹ, ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ಈ ಹಿಂದೆ ಮದುವೆಯಾಗಿರದ ಬಗ್ಗೆ ಅವರು ವಾಸಿಸುವ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿ ಕಚೇರಿಯಿಂದ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಂದ ರುಜುವಾತು ಪತ್ರ ಪಡೆದು ಸಲ್ಲಿಸಬೇಕು. ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಂದ ಮದುವೆ ನೋಂದಣಿ ಪ್ರಮಾಣಪತ್ರ ಪಡೆದು ಪ್ರಾಧಿಕಾರದ ಕಚೇರಿಗೆ ಸಲ್ಲಿಸಬೇಕು.

ಪ್ರಾಧಿಕಾರದ ವತಿಯಿಂದ ವಧುವಿಗೆ ಚಿನ್ನದ ಮಾಂಗಲ್ಯ, ಬೆಳ್ಳಿ ಕಾಲುಂಗುರ, ಸೀರೆ-ರವಿಕೆ ಹಾಗೂ ವರನಿಗೆ ಪಂಚೆ, ಶರ್ಟ್ ಹಾಗೂ ಟವೆಲ್ ಉಚಿತವಾಗಿ ನೀಡಲಾಗುತ್ತದೆ. ವಧು ವರರ ಕಡೆಯವರು ತಲಾ 10 ಜನಕ್ಕೆ ಮೀರದಂತೆ ಭಾಗವಹಿಸಲು ಅವಕಾಶವಿದೆ. ಇವರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗುವುದು. ಜೂನ್ 20 ರಂದು ಬೆಳಿಗ್ಗೆ 9.15ರಿಂದ 9.50 ಗಂಟೆಯೊಳಗೆ ಸಾಮೂಹಿಕ ವಿವಾಹ ನಡೆಯಲಿದೆ.

ವಧುವರರು ಪ್ರಾಧಿಕಾರದ ಕಾರ್ಯದರ್ಶಿಯವರಿಂದ ನಿಗದಿತ ಅರ್ಜಿ ನಮೂನೆ ಪಡೆದು ಹೆಸರು ಮತ್ತು ವಿಳಾಸವನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜೂನ್ 10ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಮಾಹಿತಿಗಾಗಿ ಮೊ.ಸಂ.9480065393, 9113215342, ದೂ.ಸಂಖ್ಯೆ 08225-272128 ಸಂಪರ್ಕಿಸುವಂತೆ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT