ಹನೂರು: ಸರ್ಕಾರ ಶಾಲೆ ಮಕ್ಕಳಿಗೆ ಇಲಾಖೆಯಿಂದ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ದಾನಿಗಳೂ ನೀಡುವ ಸಾಮಗ್ರಿಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಬೆಂಗಳೂರಿನ ರಾಜಶೇಖರ್ ತಿಳಿಸಿದರು.

ತಾಲೂಕಿನ ದೊಮ್ಮನ ಗದ್ದೆ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳು ಹಾಗೂ ಟಿ– ಶರ್ಟ್ ವಿತರಣೆ ಮಾಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರದ ಸೌಲಭ್ಯ ದೊರಕಿದರೂ ಲೇಖನ ಸಾಮಗ್ರಿಗಳ ಕೊರತೆಯಿಂದಾಗಿ ಶೈಕ್ಷಣಿಕವಾಗಿ ಹಿಂದೆ ಬೀಳುವಂತಹ ನಿದರ್ಶನಗಳನ್ನು ನೋಡಿದ್ದೇವೆ. ಇಂಥ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ನಾವು ಲೇಖನ ಸಾಮಗ್ರಿಗಳು ಹಾಗೂ ಟ್ರ್ಯಾಕ್ ಸೂಟ್, ಇತರ ಸಾಮಗ್ರಿಗಳನ್ನು ವಿತರಣೆ ಮಾಡಿದ್ದೇವೆ ಎಂದರು.

ದಾನಿ ನಾರಾಯಣ್ ಮಾತನಾಡಿ, ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಮಕ್ಕಳಿಗೆ ಒಂದಷ್ಟು ಸಾಮಗ್ರಿಗಳ ಕೊರತೆ ಕಾಡುತ್ತದೆ ಅಂತಹ ಸಂದರ್ಭದಲ್ಲಿ ದಾನಿಗಳ ನೆರವಿನಿಂದ ಪಡೆದುಕೊಂಡು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಭವಿಷ್ಯ ರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಾಮಗ್ರಿಗಳನ್ನು ಕೊಡುತ್ತಿದ್ದೇವೆ ಎಂದರು.

ವಿದ್ಯಾರ್ಥಿಗಳಿಗೆ ಪೆನ್ನು, ಪುಸ್ತಕ,ಪರೀಕ್ಷಾ ಪ್ಯಾಡ್, ಟಿ–ಶರ್ಟ್, ಪ್ಯಾಂಟ್, ಮಿಕ್ಸಿ, ಗುರುತಿನ ಚೀಟಿ,ಮುಖ್ಯ ಶಿಕ್ಷಕರ ಚೇರ್ ವಸ್ತುಗಳನ್ನು ವಿತರಿಸಲಾಯಿತು.

ರಾಮಪುರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಹದೇವ್ ಪ್ರಸಾದ್, ದುಮ್ಮನಗದ್ದೆ ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್,ಎಸ್ ಡಿ ಎಂ ಸಿ ಅಧ್ಯಕ್ಷೆ ಬಾನು ಬಾಯಿ, ಸಮಿತಿಯ ಸದಸ್ಯರುಗಳು, ವಡ್ಡರ ದೊಡ್ಡಿ ಶಾಲಾ ಮುಖ್ಯ ಶಿಕ್ಷಕ ಮಾದೇವ,ಹಾಗೂ ಸಹ ಶಿಕ್ಷಕಿ ಸುಧಾಮಣಿ ಹಾಗೂ ಮಕ್ಕಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.