ಚಾಮರಾಜನಗರ: ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಹೇಳಿಕೊಡಲಾಗುವುದು ಎಂದು ನೆಟ್ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗೀಸ್ಬಾನು ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ್ವಿತೀಯು ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ ಅಸೋಸಿಯೇಷನ್ ವತಿಯಿಂದ ನುರಿತ ಉಪನ್ಯಾಸಕರಿಂದ ಉಚಿತವಾಗಿ ಟ್ಯೂಷನ್ ಹೇಳಿಸಿಕೊಡಲಾಗುತ್ತಿದ್ದು ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಶಿಕ್ಷಣ, ಕ್ರೀಡೆ ನಾಣ್ಯದ ಎರಡು ಮುಖಗಳಿದ್ದಂತೆ, ಕ್ರೀಡೆಯ ಜೊತೆಗೆ ಶಿಕ್ಷಣಕ್ಕೂ ಒತ್ತು ನೀಡಲು ಹಾಗೂ ಟ್ಯೂಷನ್ ಶುಲ್ಕದ ಹೊರೆಯಿಂದ ಬಡ ಪ್ರತಿಭಾವಂತ ಮಕ್ಕಳಿಗೆ ಕಷ್ಟವಾಗುತ್ತಿರುವುದನ್ನು ಮನಗಂಡು ಅಸೋಷಿಯೇಷನ್ ಉಚಿತ ಟ್ಯೂಷನ್ ನೀಡಲು ಮುಂದಾಗಿದೆ ಎಂದರು.

ಮುಂದೆ ನೀಟ್, ಸಿಇಟಿ, ಜೆಇಇನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶವಿದೆ. ಹೆಚ್ಚಿನ ಮಾಹಿತಿಗಾಗಿ 9901614577. 8660422976 ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಸದಸ್ಯರಾದ ಅಕ್ಷಯ್, ಲೋಕೇಶ್, ಸುರೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.