ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಗಾರ ಶ್ರೀನಿವಾಸ ರಾವ್ ನಿಧನ

Published 14 ಸೆಪ್ಟೆಂಬರ್ 2023, 5:06 IST
Last Updated 14 ಸೆಪ್ಟೆಂಬರ್ 2023, 5:06 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಶ್ರೀನಿವಾಸ ರಾವ್ (96) ಅವರು ಬುಧವಾರ ಮೈಸೂರಿನಲ್ಲಿ ನಿಧನರಾದರು. 

ನಗರದ ರಾಮಸಮು ದ್ರದವರಾದ ಅವರಿಗೆ ನಾಲ್ವರು ಪುತ್ರರಿದ್ದಾರೆ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಶ್ರೀನಿವಾಸ್ ರಾವ್ ಅವರ ನಿವಾಸಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ
ಹುಡೇದ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಜಿಲ್ಲಾಡಳಿತದ ಪರವಾಗಿ ಗೌರವ ಸಮರ್ಪಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರನ್ನು ಮೈಸೂರಿನ ಅವರ ಮನೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಆಗಸ್ಟ್ 9ರಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸನ್ಮಾನಿಸಿದ್ದರು.

ಮೈಸೂರಿನ ಹರಿಶ್ಚಂದ್ರಘಾಟ್‌ನಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಶ್ರೀನಿವಾಸ ರಾವ್‌
ಶ್ರೀನಿವಾಸ ರಾವ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT