ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಂಧನ ಬೆಲೆ ಹೆಚ್ಚಳ: ಬಿಜೆಪಿ–ಜೆಡಿಎಸ್‌ ಪ್ರತಿಭಟನೆ 

Published 20 ಜೂನ್ 2024, 14:24 IST
Last Updated 20 ಜೂನ್ 2024, 14:24 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಇಲ್ಲಿನ ಬಸ್ ನಿಲ್ದಾಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

 ಮುಖಂಡರು ಸ್ಕೂಟರ್ ಅಣಕು ಶವ ಮಾಡಿ,  ಹೆದ್ದಾರಿಯಲ್ಲಿ ಮೆರವಣಿಗೆ ಮಾಡಿ, ಬಸ್ ನಿಲ್ದಾಣ ಬಳಿ  ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಘೋಷಣೆ ಕೂಗಿ ಪ್ರತಿಭಟಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಏಕಾ ಏಕಿಯಾಗಿ ಪೆಟ್ರೋಲ್ ಹಾಗೂ ಡಿಸೇಲ್‌ಗಳ ಬೆಲೆ ಹೆಚ್ಚಳ ಮಾಡಿರುವುದರಿಂದ ವಾಹನ ಸವಾರರು, ಯಂತ್ರಗಳ ಬಳಕೆ ಮಾಡುವವರಿಗೆ ಹೊರೆಯಾಗಿದೆ ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಯೋಜನೆಗಳ ₹25 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕೊಳ್ಳೇಗಾಲ ಗ್ರಾಮಾಂತರ ಮಂಡಲ ಅಧ್ಯಕ್ಷ ಕಾವುದವಾಡಿ ನಾಗೇಶ್, ಜಿಲ್ಲಾ ಉಪಾಧ್ಯಕ್ಷ ಮಂಗಲ ಶಿವಕುಮಾರ್, ಜೆಡಿಎಸ್ ಮುಖಂಡ ಪುಟ್ಟಸ್ವಾಮಿ, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ರವೀಶ್, ಗ್ರಾಮಪಂಚಾಯಿತಿ ಅಧ್ಯಕ್ಷ ಪುನೀತ್, ಸದಸ್ಯ ಎಂ.ಪಿ.ಶಂಕರ್, ಕುದೇರು ಜಯಶಂಕರ್, ಮಹದೇವಪ್ರಸಾದ್, ಉಮ್ಮತ್ತೂರು ಶ್ರೀಕಂಠ, ಲೋಕೇಶ್, ಚಿನ್ನಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT