ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹರ್ಷಲ್ ಭೊಯರ್ ನಾರಾಯಣರಾವ್ ಅವರನ್ನು ನೂತನವಾಗಿ ರಚಿಸಲಾಗಿರುವ ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೋಮವಾರ ವರ್ಗಾವಣೆ ಮಾಡಲಾಗಿದೆ.
ಅವರ ಜಾಗಕ್ಕೆ ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕಿಯಾಗಿದ್ದ ಕೆ.ಎಂ.ಗಾಯತ್ರಿ ಅವರನ್ನು ನಿಯೋಜಿಸಲಾಗಿದೆ.
ಗಾಯತ್ರಿ ಅವರು ಈ ಹಿಂದೆ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.