ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮ ಸ್ಥಾಪನೆ: ಆಂಧ್ರ, ತೆಲಂಗಾಣ ಮಾದರಿ ಬಗ್ಗೆ ಚರ್ಚೆ

Last Updated 23 ಜುಲೈ 2018, 12:08 IST
ಅಕ್ಷರ ಗಾತ್ರ

ಚಾಮರಾಜನಗರ: ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲೂ ಸರಳ ಮತ್ತು ಸುಲಲಿತ ಉದ್ಯಮ ಸ್ಥಾಪನೆ ವ್ಯವಸ್ಥೆ ಅಳವಡಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ‌ ಕೆ.ಜೆ. ಜಾರ್ಜ್‌ ಸೋಮವಾರ ಹೇಳಿದರು.

ಇಲ್ಲಿನ ಬದನಗುಪ್ಪೆ ಮತ್ತು ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಉದ್ಯಮಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೈಗಾರಿಕಾ ನೀತಿಯನ್ನು ಇನ್ನಷ್ಟು ಸರಳಗೊಳಿಸಬೇಕು ಎಂಬ ಮನವಿಯನ್ನು ಉದ್ಯಮಿಗಳು ಮಾಡಿದ್ದಾರೆ. ಉದ್ಯಮ ಸ್ಥಾಪ‍ನೆಗೆ ಏಕ ಗವಾಕ್ಷಿ ವ್ಯವಸ್ಥೆ ಜಾರಿಯಲ್ಲಿದ್ದರೂ, ಅನುಮತಿ ಪಡೆಯುವುದು ಕಷ್ಟವಾಗುತ್ತದೆ ಎಂದು ಅವರು ಹೇಳುತ್ತಿದ್ದಾರೆ’ ಎಂದರು.

’ಉದ್ಯಮ ಸ್ಥಾಪನೆಗೆ ಸುಲಲಿತ ವ್ಯವಸ್ಥೆ ತರಲು ನಾವು ಬದ್ಧರಾಗಿದ್ದೇವೆ.ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾದರಿ‌ಯ ವ್ಯವಸ್ಥೆ ನಮ್ಮಲ್ಲಿ ಜಾರಿಗೆ ತರುವ ಸಂಬಂಧ ಪ್ರಸ್ತಾವನೆಯೊಂದನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT