ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ | ಬಾಲಕಿ ಅಪಹರಣ: ಪ್ರಕರಣ ದಾಖಲು

Published 7 ಮೇ 2024, 15:51 IST
Last Updated 7 ಮೇ 2024, 15:51 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಬಾಲಕಿಯನ್ನು ಅಪಹರಿಸಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದ ಶಿವು (21) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದಾರೆ. 

ತಾಲ್ಲೂಕಿನ ಗ್ರಾಮವೊಂದರ ಸಂಬಂಧಿಕರ‌ ಮನೆಗೆ ಬಂದಿದ್ದ ಬಾಲಕಿಯನ್ನು ಇದೇ 4 ರಂದು ರಾತ್ರಿ ತನ್ನ ಬೈಕ್‌ನಲ್ಲಿ ಮೈಸೂರಿಗೆ ಕರೆದುಕೊಂಡು ಹೋಗಿ ಎರಡು ದಿನ ಜೊತೆಯಲ್ಲಿಯೇ ಇರಿಸಿಕೊಂಡು ನಂತರ ವಾಪಸ್‌ ಮನೆಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಲಕಿಯಿಂದ ಹೇಳಿಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಕೊಳ್ಳೇಗಾಲದ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT