ಮಂಗಳವಾರ, ಅಕ್ಟೋಬರ್ 27, 2020
24 °C

ಸಂತೇಮರಹಳ್ಳಿ: ಚಿನ್ನ–ನಗದು ದೋಚಿ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂತೇಮರಹಳ್ಳಿ: ಇಲ್ಲಿಗೆ ಸಮೀಪದ ಕಮರವಾಡಿ ಕಬಿನಿ ನಾಲೆಯ ಬಳಿ ಶುಕ್ರವಾರ ಮಧ್ಯಾಹ್ನ ಊಟ ಮಾಡುತ್ತಿದ್ದ ವ್ಯಕ್ತಿಗಳಿಬ್ಬರ ಮೇಲೆ ಹಲ್ಲೆ ನಡೆಸಿದ ಕಳ್ಳರಿಬ್ಬರು, ಚಿನ್ನ ಹಾಗೂ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಮೋಳೆ ಗ್ರಾಮದ ಶಿವರಾಜು, ರಾಜು ಎಂಬುವವರು ಕಬಿನಿ ನಾಲೆ ಬಳಿ ಊಟ ಮಾಡಲು ಕುಳಿತ್ತಿದ್ದಾಗ, ಸ್ಕೂಟರ್‌ನಲ್ಲಿ ಬಂದ ಇಬ್ಬರು, ಇವರಿಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಎಸಗಿದ ಬಳಿಕ ಇವರ ಬಳಿಯಿದ್ದ ₹ 22 ಸಾವಿರ ನಗದು, 12 ಗ್ರಾಂ ಚಿನ್ನದ ಚೈನ್ ಹಾಗೂ ಬೆಳ್ಳಿಯ ಬ್ರಾಸ್‍ಲೈಟ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಂತೇಮರಹಳ್ಳಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು