ಶುಕ್ರವಾರ, ಮೇ 20, 2022
19 °C

ಜಿಲ್ಲೆಯ ವಿವಿಧ ಕಡೆಗಳಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಾದ್ಯಂತ ಮಳೆಯ ಸಿಂಚನ ಮುಂದುವರೆದಿದೆ. ಜಿಲ್ಲಾ ಕೇಂದ್ರ ಚಾಮರಾಜನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಶನಿವಾರವೂ ಮಳೆ ಮುಂದುವರೆದಿದೆ. 

ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಳೆ‌, ಒಂದು ಕಾಲು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಕೊಳ್ಳೇಗಾಲ, ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಬಿದ್ದಿದೆ. 

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ 6.5 ಸೆಂ.ಮೀ ಮಳೆಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಕೂತನೂರಿನಲ್ಲಿ 7.3 ಸೆಂ.ಮೀ ಮಳೆಯಾಗಿದೆ. 

 ಜಿಲ್ಲೆಯಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. 21ನೇ ತಾರೀಖಿನವರೆಗೂ ತುಂತುರಿನಿಂದ ಹಿಡಿದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.