ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಭಾನುವಾರದ ಲಾಕ್‌ಡೌನ್‌ ಈ ವಾರವೂ ಯಶಸ್ವಿ

Last Updated 19 ಜುಲೈ 2020, 15:43 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್‌–19 ಹರಡುವುದನ್ನು ತಡೆಯುವ ಭಾಗವಾಗಿ ರಾಜ್ಯದಾದ್ಯಂತ ಜಾರಿ ಮಾಡಲಾಗಿರುವ ಭಾನುವಾರದ ಲಾಕ್‌ಡೌನ್‌ನಿಗೆ ಜಿಲ್ಲೆಯಲ್ಲಿ ಮೂರನೇ ವಾರವೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ನಗರ, ಪಟ್ಟಣ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಮಾರಾಟ ಬಿಟ್ಟು, ಉಳಿದ ವಹಿವಾಟು ಸ್ತಬ್ಧಗೊಂಡಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಚಟುವಟಿಕೆಗಳು ಎಂದಿನಂತೆ ಇದ್ದವು. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಲಿಲ್ಲ.

ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಆಸ್ಪತ್ರೆ, ಔಷಧ ಅಂಗಡಿ, ಹಾಲಿನ ಕೇಂದ್ರಗಳು, ಹಣ್ಣು, ತರಕಾರಿ ಮಾಂಸದ ಅಂಗಡಿಗಳು ತೆರೆದಿದ್ದವು. ಕೆಲವು ಹೋಟೆಲ್‌ಗಳು ಕೂಡ ಕಾರ್ಯನಿರ್ವಹಿಸಿದವು. ಆದರೆ, ಪಾರ್ಸೆಲ್‌ ನೀಡುವುದಕ್ಕೆ ಅವಕಾಶ ಇತ್ತು.

ವಾಹನ ಸಂಚಾರ ವಿರಳ: ನಗರ, ಪಟ್ಟಣ, ಹೋಬಳಿ ಕೇಂದ್ರಗಳಲ್ಲಿ ವಾಹನಗಳ, ಜನರ ಸಂಚಾರ ವಿರಳವಾಗಿತ್ತು. ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಆಟೊ, ಕ್ಯಾಬ್‌ ಟಾಕ್ಸಿಗಳೂ ಸಂಚರಿಸಲಿಲ್ಲ.

ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರನ್ನು ತಡೆದ ಪೊಲೀಸರು ಅವರ ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT