ಮಂಗಳವಾರ, ಸೆಪ್ಟೆಂಬರ್ 28, 2021
25 °C
ಚಾಮರಾಜನಗರ: ಕೋವಿಡ್‌ ಲಸಿಕಾ ಮಹಾ ಮೇಳ

1.19 ಲಕ್ಷ ಜನರಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಆ.27ರಿಂದ ಆರಂಭವಾಗಿರುವ ಒಂದು ವಾರದ ಕೋವಿಡ್‌ ಲಸಿಕಾ ಮಹಾ ಮೇಳಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಬುಧವಾರದವರೆಗೆ (ಸೆ.1) 1,19,613 ಡೋಸ್‌ ಲಸಿಕೆ ನೀಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 6,85,541 ಡೋಸ್‌ ಲಸಿಕೆ ಹಾಕಲಾಗಿದೆ.  

ಜಿಲ್ಲೆಯ ನಗರ ವ್ಯಾಪ್ತಿಯ ಜನರು ಶೇ 88ರಷ್ಟು ಹಾಗೂ ಗ್ರಾಮೀಣ ಭಾಗದ ಶೇ 63ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. ಸಂಭಾವ್ಯ ಕೋವಿಡ್‌ ಮೂರನೇ ಅಲೆಯನ್ನು ಎದುರಿಸಲು 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

‘ಜಿಲ್ಲೆಯಲ್ಲಿ ಬುಡಕಟ್ಟು ಜನಾಂಗ ದವರ ಮನವೊಲಿಸಿ ಇದುವರೆಗೂ 12,917 ಫಲಾನುಭವಿಗಳ ಹಾಡಿ ಗಳ ಮನೆ ಮನೆಗೆ ತೆರಳಿ ಲಸಿಕೆ ನೀಡ ಲಾಗಿದೆ. ಬಾಕಿ 2,731 ಫಲಾನು ಭವಿಗಳ ಮನವೊಲಿಸಿ ಮುಂದಿನ ದಿನ ಗಳಲ್ಲಿ ಶೇ 100ರಷ್ಟು ಲಸಿಕೆ ನೀಡ ಲಾಗುವುದು. ಅಂತರರಾಜ್ಯ ಸಂಪರ್ಕ ಕಲ್ಪಿಸುವ ಗಡಿಭಾಗದಲ್ಲಿರುವ ಎಲ್ಲ ಗ್ರಾಮಗಳಲ್ಲಿ ಶೇ 98ರಷ್ಟು ಕೋವಿಡ್ ಲಸಿಕೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೇ 100ರಷ್ಟು ಲಸಿಕೆ ನೀಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

13 ಮಂದಿಗೆ ಸೋಂಕು, ಒಬ್ಬರ ಸಾವು

ಜಿಲ್ಲೆಯಲ್ಲಿ ಗುರುವಾರ 13 ಜನರಿಗೆ ಕೋವಿಡ್‌ ಇರುವುದು ಖಚಿತವಾಗಿದೆ. ಐವರು ಗುಣಮುಖರಾಗಿದ್ದಾರೆ. 67 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 82ಕ್ಕೆ ಏರಿದೆ. ಸೋಂಕಿತರ ಪೈಕಿ ಇಬ್ಬರು ಐಸಿಯುನಲ್ಲಿ ಹಾಗೂ 19 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,344 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 31,725 ಮಂದಿ ಸೋಂಕು ಮುಕ್ತರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ ಈವರೆಗೆ 578 ಮಂದಿ ಮೃತಪಟ್ಟಿದ್ದಾರೆ.   

ಗುರುವಾರ ದಾಖಲೆಯ 2,468 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,468 ವರದಿ ನೆಗೆಟಿವ್‌ ಬಂದಿವೆ. ಎಂಟು ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.