ಗುಂಡ್ಲುಪೇಟೆ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನವು ತಾಲ್ಲೂಕಿನ ವಡ್ಡಗೆರೆ ಸಮೀಪ ಬುಧವಾರ ಪಲ್ಟಿಯಾಗಿ 18 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ.

ಯಾನಗಳ್ಳಿಯಿಂದ ಅಂಕಹಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಗೂಡ್ಸ್ ಆಟೊ ಪಲ್ಟಿಯಾಗಿದೆ. ಅಪಘಾತದಲ್ಲಿ ಪ್ರೇಮ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಳಿದ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತೆರಕಣಾಂಬಿ ಠಾಣೆ ಸಬ್ ಇನ್ಸ್ಪೆಕ್ಟರ್ ಮಹೇಶ್, ಎಎಸ್ಐ ಶಿವನಂಜಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.