ಮಹದೇಶ್ವರ ಬೆಟ್ಟ: ಜಿಲ್ಲೆಯ ಗಡಿಭಾಗ ಗೋಪಿನಾಥ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ 4.2 ಕಿ.ಮೀ ರಸ್ತೆ ಡಾಂಬರೀಕರಣಕ್ಕೆ ಶಾಸಲ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ ನೀಡಿದರು.

ರಾಜ್ಯ ಹೆದ್ದಾರಿ ನಿರ್ವಹಣೆ ಯೋಜನೆ ಅಡಿಯಲ್ಲಿ ₹1 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಹಲವಾರು ವರ್ಷಗಳಿಂದ ರಸ್ತೆ ಅಭಿವೃದ್ಧಿಯಾಗಿರಲಿಲ್ಲ. ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದರು. ಮೊದಲ ಹಂತದಲ್ಲಿ ರಸ್ತೆಯ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಉಳಿದಿರುವ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಮಾಡಲಾಗುವುದು ಎಂದು ತಿಳಿಸಿದರು.

ನಂತರ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆ, ಕಾಲುವೆ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ನೂತನ ಆಸ್ಪತ್ರೆ ಸ್ಥಾಪನೆಗೆ ಸರ್ವೆ ನಂ 51/1 ರಲ್ಲಿ ಒಟ್ಟು 5.50 ಎಕರೆ ಜಮೀನು ಇದ್ದು ಇದರಲ್ಲಿ ಸುಮಾರು 2 ಎಕರೆ ಜಾಗದಲ್ಲಿ ಅಸ್ಪತ್ರೆ ಸ್ಥಾಪನೆ ಮಾಡಲು ಸ್ಥಳ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಎಇಇ ಅಭಿಲಾಷ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ರೆಡ್ಡಿ, ಸದಸ್ಯರಾದ ಸೋಮುನಾಯಕ, ಗ್ರಾಂ.ಪ ಮಾಜಿ ಅಧ್ಯಕ್ಷ ಗೋವಿಂದರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ರಾಜ, ಗ್ರಾಂ.ಪಂ ಅಬಿವೃದ್ಧಿ ಅಧಿಕಾರಿ ರಾಜ್ ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.