ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರ ಮುಷ್ಕರ: ಚಾಮರಾಜನಗರದಲ್ಲಿ ಬೆಂಬಲ

Last Updated 1 ಮಾರ್ಚ್ 2023, 5:56 IST
ಅಕ್ಷರ ಗಾತ್ರ

ಚಾಮರಾಜನಗರ: 7ನೇ ವೇತನ ಆಯೋಗ ಜಾರಿ ಹಾಗೂ ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ‌ ನೌಕರರು ಬುಧವಾರದಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಭಾಗಿಯಾಗಿದ್ದು, ಜಿಲ್ಲಾಡಳಿತ ಭವನಕ್ಕೆ ಯಾರೂ ಕರ್ತವ್ಯಕ್ಕೆ ಹಾಜರಾಗಿಲ್ಲ.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಖು ಹಾಗೂ ಸದಸ್ಯರು, ಜಿಲ್ಲಾಡಳಿತ ಭವನದ ಗೇಟ್ ಬಳಿಯೇ ನಿಂತಿದ್ದಾರೆ. ಇತರೆ ನೌಕರರು ಕೂಡ ಅವರೊಂದಿಗೆ ಸೇರುತ್ತಿದ್ದಾರೆ.

ಜಿಲ್ಲಾಡಳಿತ ಭವನ, ತಾಲ್ಲೂಕು ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು ಬಿಕೊ ಎನ್ನುತ್ತಿವೆ.

ಸರ್ಕಾರಿ ಪ್ರಾಥಮಿಕ ಶಿಕ್ಷಕರ ಸಂಘ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಬಹುಜನ ಸಮಾಜ ಪಕ್ಷ ಕೂಡ ಮುಷ್ಕರವನ್ನು ಬೆಂಬಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT