ಸರ್ಕಲ್ ಇನ್ಸ್ಪೆಕ್ಟರ್ ಶ್ರೀಕಾಂತ್ ಮಾತನಾಡಿ, ‘ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಗಣೇಶನ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ನಡುವೆ ಯಾವುದೇ ಗಲಾಟೆ ಗದ್ಧಲಕ್ಕೆ ಅವಕಾಶ ನೀಡಬಾರದು. ಸಂಜೆ ಮತ್ತು ರಾತ್ರಿ ನಿಗದಿಪಡಿಸಿದ ಸಮಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಮುಗಿಸಬೇಕು. ವೃದ್ಧರು, ರೋಗಿಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಬ್ಬರದ ಧ್ವನಿವರ್ಧಕ ಮತ್ತು ಡಿಜೆ ಬಳಕೆ ನಿಯಂತ್ರಿಸಲಾಗಿದೆ’ ಎಂದರು.