ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ: ಮೊದಲ ಹಂತದಲ್ಲಿ ಶೇ 85.70 ರಷ್ಟು ಮತದಾನ

Last Updated 23 ಡಿಸೆಂಬರ್ 2020, 5:09 IST
ಅಕ್ಷರ ಗಾತ್ರ

ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದಲ್ಲಿ ಶೇ 85.70ರಷ್ಟು ಮತದಾನವಾಗಿದೆ.

ಮತದಾನದ ಅಂತಿಮ ಅಂಕಿ ಅಂಶಗಳನ್ನು ಜಿಲ್ಲಾಡಳಿತ ಮಂಗಳವಾರ ತಡರಾತ್ರಿ ಪ್ರಕಟಿಸಿದೆ

ಚಾಮರಾಜನಗರ ತಾಲ್ಲೂಕಿನಲ್ಲಿ ಶೇ 83.94 ಹಾಗೂ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಶೇ 88.26ರಷ್ಟು ಮಂದಿ ಮತ ಚಲಾಯಿಸಿದ್ದಾರೆ.

ಹಕ್ಕು ಚಲಾಯಿಸಿದವರು: ಅಂತಿಮ ಮತದಾರರ ಪಟ್ಟಿಯಲ್ಲಿ 3,94,103 ಮಂದಿ ಹಕ್ಕು ಚಲಾಯಿಸಲು ಅರ್ಹತೆ ಹೊಂದಿದ್ದರು. ಈ ಪೈಕಿ 1,94,784 ಪುರುಷರು,1,99,288 ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರು 31 ಮಂದಿ ಇದ್ದರು.

ಇವರಲ್ಲಿ 1,69,391 ಪುರುಷರು, 1,68,349 ಮಹಿಳೆಯರು, ನಾಲ್ವರು ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ 3,37,744 ಮಂದಿ ಮತದಾನ ಮಾಡಿದ್ದಾರೆ.

ಚಾಮರಾಜನಗರ ತಾಲ್ಲೂಕಿನ 43 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 2,33,686 ಮತದಾರರಿದ್ದರು (1,15,447 ಪುರುಷ, 1,18,220 ಮಹಿಳೆಯರು, ಲೈಂಗಿಕ ಅಲ್ಪಸಂಖ್ಯಾತರು 19). ಈ ಪೈಕಿ 98,575 ಪುರುಷರು, 95,579 ಮಹಿಳೆಯರು, ನಾಲ್ವರು ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ 1,96,158 ಮತದಾರರು ಮತ ಚಲಾಯಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ 34 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 1,60,417 ಮತದಾರರಿದ್ದರು ( 79,337 ಪುರುಷ, 81,068 ಮಹಿಳೆಯರು ಹಾಗೂ 12 ಮಂದಿ ಲೈಂಗಿಕ ಅಲ್ಪಸಂಖ್ಯಾತರು). ಇವರಲ್ಲಿ 70,816 ಪುರುಷರು, 70,770 ಮಹಿಳೆಯರು ಸೇರಿ 1,41,586 ಮಂದಿ ಮತ ಚಲಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT