ಚಾಮರಾಜನಗರ: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಜಿಲ್ಲೆಯಲ್ಲಿ ಶನಿವಾರ (ಆ.5) ಚಾಲನೆ ಸಿಗಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಎಚ್.ಎಂ.ಗಣೇಶ್ ಪ್ರಸಾದ್, ಮರಿತಿಬ್ಬೇಗೌಡ, ಸಿ.ಎನ್.ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಮಧು ಜಿ. ಮಾದೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.