ಚಾಮರಾಜನಗರ: ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ’ ಎಂದು ಎಂಎಸ್ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ತಾಲ್ಲೂಕಿನ ಚಂದಕವಾಡಿಯ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬಡತನ, ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿದರು. ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವುದು ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮಾಡಲು ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಯಿತು’ ಎಂದರು.

‘ಮಾಜಿ ಪ್ರಧಾನಿ ಇಂದಿರಾಗಾಂಧಿ 20 ಅಂಶಗಳ ಕಾರ್ಯಕ್ರಮವು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಕಲ್ಪನೆಗೆ ಪ್ರೇರಣೆಯಾಗಿದೆ. ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗಲೂ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ಇದೀಗ ಪಂಚ ಗ್ಯಾರಂಟಿಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು ಸಮಾಜದ ಎಲ್ಲ ವರ್ಗಗಳನ್ನು ತಲುಪುತ್ತಿವೆ’ ಎಂದರು.

‘ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಪ್ರತಿ ವರ್ಷ ₹ 55 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದು, ಗೃಹಲಕ್ಷ್ಮೀ ಯೋಜನೆಯು ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸಹಕಾರಿಯಾಗಿದೆ’ ಎಂದು ಶಾಸಕ ಪುಟ್ಟರಂಗ ಶೆಟ್ಟಿ ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಸೋಮೇಶ್ವರ್ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲವಾಗಿದ್ದು ಕಾರ್ಯಕ್ರಮಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳು ಅನಿಸಿಕೆ ಹಂಚಿಕೊಂಡರು. ಯುವನಿಧಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಸದಸ್ಯರಾದ ಮರಿಯಾಲದ ಹುಂಡಿ ಕುಮಾರ್, ಮಾದಾಪುರ ಕುಮಾರಸ್ವಾಮಿ, ಚಿನ್ನಸ್ವಾಮಿ, ರಾಜೇಶ್, ರಮೇಶ್, ಮಂಜುಳಾ, ರಾಜು, ಮಲ್ಲಿಕಾರ್ಜುನ, ಸುಕುಮಾರ್, ಗಣೇಶ್ ಕುಮಾರ್ ಇದ್ದರು.

‘ಮಾತು ಉಳಿಸಿಕೊಂಡ ಕಾಂಗ್ರೆಸ್’

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು ಅಧಿಕಾರಕ್ಕೆ ಬಂದ ಕೂಡಲೇ ಈಡೇರಿಸುವ ಮೂಲಕ ಜನತೆ ಕೊಟ್ಟ ಮಾತು ಉಳಿಸಿಕೊಂಡಿದೆ. ದೇಶದಲ್ಲಿಯೇ ಮೊದಲಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸುವ 10 ಕೆ.ಜಿ ಅಕ್ಕಿಯಲ್ಲಿ 5 ಕೆ.ಜಿ ಅಕ್ಕಿಯ ಬದಲಾಗಿ ಉಪ್ಪು ಕಾಳು ಅಡುಗೆ ಎಣ್ಣೆ ನೀಡಲು ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.