ಬುಧವಾರ, ಆಗಸ್ಟ್ 17, 2022
25 °C

ಬಜೆಟ್‌ ಸಭೆ ಮುಗಿಸಿ ರೆಸಾರ್ಟ್‌ನಲ್ಲಿ ಪುರಸಭೆ ಸದಸ್ಯರ ಮೋಜು: ವಿಡಿಯೊ ವೈರಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಪಟ್ಟಣದ ಪುರಸಭೆ ಸದಸ್ಯರು ರೆಸಾರ್ಟ್‌ ಒಂದರಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೊ ತುಣುಕುಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿವೆ.

ಫೆ.25ರಂದು ಪುರಸಭೆಯಲ್ಲಿ ಬಜೆಟ್‌ ಮಂಡನೆ ಇತ್ತು. ಬಜೆಟ್‌ ಸಭೆ ಮುಗಿದ ನಂತರ, ಮಹಿಳಾ ಸದಸ್ಯರನ್ನು ಬಿಟ್ಟು, ಅಧ್ಯಕ್ಷ ಗಿರೀಶ್‌ ಸೇರಿದಂತೆ ಎಲ್ಲ ಪಕ್ಷಗಳ ಸದಸ್ಯರು ತಿ.ನರಸೀಪುರ ತಾಲ್ಲೂಕಿನಲ್ಲಿರುವ ಖಾಸಗಿ ರೆಸಾರ್ಟ್‌ಗೆ ಹೋಗಿದ್ದರು ಎಂದು ತಿಳಿದುಬಂದಿದೆ. 

ಡಿಜೆ ಹಾಡಿಗೆ ಸದಸ್ಯರೆಲ್ಲರೂ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ವೈರಲ್‌ ಆಗಿವೆ. ಕೆಲವು ಸದಸ್ಯರು, ತಮ್ಮ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಚಿತ್ರ ಹಾಗೂ ವಿಡಿಯೊಗಳನ್ನು ಹಾಕಿಕೊಂಡಿದ್ದರು. 

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪುರಸಭೆ ಅಧ್ಯಕ್ಷ ಗಿರೀಶ್‌ ಅವರಿಗೆ ದೂರವಾಣಿ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು