ಚಾಮರಾಜನಗರ: ರಾಜ್ಯದಾದ್ಯಂತ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ಎದುರಾಗಿದ್ದು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಎಂದು ಎಐಡಿಎಸ್ಒ ಸಂಘಟನೆಯಿಂದ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ವೇಳೆ ಮಾತನಾಡಿದ ಎಐಡಿಎಸ್ಒ ಸಹ ಸಂಚಾಲಕಿ ಕೆ.ಹೇಮಲತಾ, ರಾಜ್ಯದಾದ್ಯಂತ ಪದವಿ ಕಾಲೇಜುಗಳ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇದುವರೆಗೂ ಅಗತ್ಯಕ್ಕೆ ತಕ್ಕಷ್ಟು ಅತಿಥಿ ಉಪನ್ಯಾಸಕರ ನೇಮಕಾತಿ ನಡೆದಿಲ್ಲ. ಕಾಯಂ ಉಪನ್ಯಾಸಕರ ಕೊರತೆಯಿಂದಾಗಿ ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬಿತವಾಗಿದ್ದು ತಕ್ಷಣ ಸರ್ಕಾರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಅತಿಥಿ ಶಿಕ್ಷಕರ ಕೊರತೆಯಿಂದ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದು ಶೈಕ್ಷಣಿಕ ಭವಿಷ್ಯಕ್ಕೆ ಕುತ್ತು ಎದುರಾಗಿದೆ. ಸೆಪ್ಟೆಂಬರ್ನಲ್ಲಿ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠ ಪ್ರವಚನಗಳು ನಡೆಯದೆ ಸಮಸ್ಯೆಯಾಗುತ್ತಿದೆ. ಯುಜಿಸಿ ನಿರ್ದೇಶನ ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣದ ಪರಿಣಾಮ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಶೀಘ್ರ ಗೊಂದಲ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಣದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನಿರ್ಧಾರ ಪಾಲಿಸುವುದು ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ಆದೇಶವಿದ್ದು ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾಗಿ ಸ್ಪಷ್ಟ ನಿಲುವು ತಾಳಬೇಕು. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಸರ್ಕಾರ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಂಚಾಲಕಿ ಯು.ಕೆ. ಚಂದನಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.