ಗುಂಡ್ಲುಪೇಟೆ: ಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ತಿಳಿಸಿದರು.

ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ಕುಂದಕೆರೆ–ವಡ್ಡಗೆರೆ ಸಂರ್ಕಿಸುವ ₹2.5 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಂದಕೆರೆ-ವಡ್ಡಗೆರೆ ಸಂಪರ್ಕ ರಸ್ತೆ 1,300 ಮೀ. ಉದ್ದ, 5.5 ಮೀ. ಅಗಲ, 280 ಮೀ. ಚರಂಡಿ ನಿರ್ಮಾಣವಾಗಲಿದೆ. ಲೋಕೋಪಯೋಗಿ ಇಲಾಖೆಯಿಂದ ಶೀಘ್ರದಲ್ಲೇ ಕೆಲಸ ಪ್ರಾರಂಭಿಸಲಾಗುವುದು. ಗುತ್ತಿಗೆದಾರರು ಕೂಡ ಬೇಗ ಕಾಮಗಾರಿ ಮುಗಿಸಬೇಕು ಎಂದು ಸೂಚಿಸಿದರು.

ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ಸಾಕಷ್ಟು ಅಭಿವೃದ್ಧಿಯಾಗಿದೆ. ವೈಯಕ್ತಿಕ ವರ್ಚಸ್ಸು ಕಡಿಮೆ ಮಾಡುವ ಉದ್ದೇಶದಿಂದ ವಿರೋಧ ಪಕ್ಷದವರು ಸುಮ್ಮನೆ ಟೀಕೆ ಮಾಡುತ್ತಾರೆ. ಅಭಿವೃದ್ಧಿ ಆದ್ಯತೆಯಾಗಿದ್ದು, ಹಂತ ಹಂತವಾಗಿ ಕಾಮಗಾರಿ ನಡೆಸಲಾಗುವುದು. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಮುಖ್ಯಮಂತ್ರಿ ವಿಶೇಷ ಅನುದಾನ ಉಳಿದ ಅಭಿವೃದ್ಧಿ ಕಾಮಗಾರಿಗೆ ವಿನಿಯೋಗ ಮಾಡಲಾಗವುದು ಎಂದು ತಿಳಿಸಿದರು.

ಕ್ಷೇತ್ರದಲ್ಲಿ ₹5. 65 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ, ಆರ್.ಡಿ.ಪಿ.ಐ., ಕೆ.ಆರ್.ಡಿ.ಎಲ್. ನಿಂದ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಹಂಗಳದಲ್ಲಿಯೂ ₹82 ಲಕ್ಷ ವೆಚ್ಚದಲ್ಲಿ ಕೆ.ಇ.ಬಿ. ಶಾಖಾ ಕಚೇರಿಯ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಬೊಮ್ಮಲಾಪುರ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನಾಯಕ ಬೀದಿಯಲ್ಲಿ ಚಾವಡಿ ನಿರ್ಮಾಣಕ್ಕೆ ಮನವಿ ಮಾಡಿದ್ದಾರೆ. ಅನುದಾನ ನೀಡುವಂತೆ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಕಾಮಗಾರಿಗಳಿಗೆ ಚಾಲನೆ: ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಹಾಗೂ ಕುಂದಕೆರೆಯಿಂದ ವಡ್ಡಗೆರೆ ಗ್ರಾಮದ ರಸ್ತೆ ನಿರ್ಮಾಣ ಕಾಮಗಾರಿ , ಬೊಮ್ಮಲಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ , ಹಂಗಳ ಗ್ರಾಮದಲ್ಲಿ ಕೆ.ಇ.ಬಿ ಶಾಖಾ ಕಚೇರಿಯ ಕಟ್ಟಡ ನಿರ್ಮಾಣ ಕಾಮಗಾರಿ , ಮದ್ದೂರು ಕಾಲೊನಿ, ಬೆಂಡಗಳ್ಳಿ, ಗರಗನಹಳ್ಳಿ, ರಾಘವಾಪುರ, ಹಳ್ಳದಮಾದಹಳ್ಳಿ, ತೊರವಳ್ಳಿ ಮತ್ತು ಚಿಕ್ಕಾಟಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಚಾಲನೆ ನೀಡಿದರು.

ಎಪಿಎಂಸಿ ಅಧ್ಯಕ್ಷ ರಂಗೂಪುರ ನಾಗರಾಜು, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಕರಕಲಮಾದಹಳ್ಳಿ ಪ್ರಭುಸ್ವಾಮಿ, ಕುಂದಕೆರೆ ಅಪ್ಪು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-37-1587212138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.