ಗುಂಡ್ಲುಪೇಟೆ: ತಾಲ್ಲೂಕಿನ ಪರಿಸರ ಮಿತ್ರ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಪೂರ್ಣವಾಗಿ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗೇಶ್ ಗಾಂಧೀಜಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಧ್ವಜಾ ರೋಹಣ ನೆರವೇರಿಸಿದರು.

ಮುಖ್ಯ ಶಿಕ್ಷಕ ಮಹದೇಶ್ವರಸ್ವಾಮಿ ಮಾತನಾಡಿ, ಇಡೀ ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ. ಸ್ವಾತಂತ್ರ್ಯ ಬಂದ ನಂತರ ನಮ್ಮ ದೇಶದ ಆಡಳಿತ ವ್ಯವಸ್ಥೆ ಹೇಗಿರಬೇಕು ಎಂಬ ಬಗ್ಗೆ ಚಿಂತಿಸಿದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ 2 ವರ್ಷ 11 ತಿಂಗಳು 18 ದಿನಗಳ ಕಾಲ ಹಗಲು ರಾತ್ರಿ ಎನ್ನದೆ ಸಂವಿಧಾನ ರಚಿಸಿ ಜಾರಿಗೆ ತಂದ ಸುವರ್ಣ ದಿನದ ಗೌರವಾರ್ಥವಾಗಿ ಪ್ರತಿಯೊಬ್ಬ ಭಾರತೀಯರು ಹೆಮ್ಮೆಯಿಂದ ಆಚರಿಸಿ ಅನುಷ್ಠಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿ ಎಂದರು.

ಸಂವಿಧಾನ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಕೊಟ್ಟಿದೆ. ನಾವು ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವುದರ ಜೊತೆಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಂವಿಧಾನದ ಆಶಯದಂತೆ ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಂವಿಧಾನ ಸರ್ವರಿಗೂ ಸಮಾನತೆಯನ್ನು ನೀಡುವ ಸರ್ವ ಶ್ರೇಷ್ಠ ಧರ್ಮ. ಸಂವಿಧಾನದ ಆಶಯದಂತೆ ನಡೆದು ಕೊಳ್ಳುತ್ತೇವೆ ಎಂದು ಸಂಕಲ್ಪ ಮಾಡೋಣ ಎಂದರು.

ಸಹ ಶಿಕ್ಷಕ ವಿನೋದ ಮಾತನಾಡಿದರು.ಶಿಕ್ಷಕರಾದ ನಂದಿನಿ, ಕವಿತ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.