ಕಟ್ಟಡ ನಿರ್ಮಾಣಕ್ಕೆ ಪುರಸಭೆಯಿಂದ ಅನುಮತಿ ಪಡೆದಿಲ್ಲ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಪರಿಶೀಲಿಸುವಂತೆ ಎಂಜಿನಿಯರ್‌ಗೆ ಸೂಚಿಸುತ್ತೇನೆ.
ಶರವಣ ಪುರಸಭೆ ಮುಖ್ಯಾಧಿಕಾರಿ
ವಿಜಯ ನಾರಾಯಣ ಸ್ವಾಮಿ ದೇವಸ್ಥಾನದ ಬಳಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೆ ಪರಿಶೀಲಿಸಿ ಪತ್ರ ಬರೆಯಲು ಪುರಸಭೆ ಅಧಿಕಾರಿಗಳಿಗೆ ಸೂಚಿಸುತ್ತೇನೆ.
ರಮೇಶ್ ಬಾಬು ತಹಸೀಲ್ದಾರ್
‘ಶಾಸಕರು ಗಮನಹರಿಸಲಿ’
ತಾಲ್ಲೂಕಿನಲ್ಲಿ ಬೆರಳೆಣಿಕೆ ಪ್ರಾಚೀನ ಕಟ್ಟಡಗಳು ಹಾಗೂ ದೇವಾಲಯಗಳು ಉಳಿದಿದ್ವು ಸಂರಕ್ಷಿಸಿಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಇತಿಹಾಸವೇ ತಿಳಿಯುವುದಿಲ್ಲ. ಐತಿಹಾಸಿಕ ಸ್ಥಳಗಳಿಗೆ ಹೆಚ್ಚು ಪ್ರವಾಸಿಗರು ಭೇಟಿನೀಡಬೇಕು. ದೇವಾಲಯದ ಸುತ್ತಲೂ ನಿಯಮಮೀರಿ ಕಾಮಗಾರಿ ನಡೆಸುವವರ ವಿರುದ್ದ ಕ್ರಮ ಜರುಗಿಸಲು ಶಾಸಕರು ಮತ್ತು ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.