ಗುಂಡ್ಲುಪೇಟೆ: ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನವನ್ನು ಶಾಸಕ ಎಚ್.ಎಂ.ಗಣೇಶ್ಪ್ರಸಾದ್ ಮಂಗಳವಾರ ಉದ್ಘಾಟಿಸಿದರು.

‘ತಾಲ್ಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾದರಿಯಾದ ಸೌಲಭ್ಯಗಳನ್ನು ಹೊಂದುವ ಮೂಲಕ ಉತ್ತಮ ಸೇವೆ ನೀಡುತ್ತಿರುವುದು ಖುಷಿ ನೀಡಿದೆ. ಬನ್ನಿತಾಳಪುರ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈಚಿನ ದಿನಗಳಲ್ಲಿ ಹೈನುಗಾರಿಕೆ ಆಶ್ರಯಿಸುತ್ತಿರುವರ ಸಂಖ್ಯೆ ಏರುಮುಖವಾಗಿ ಸಾಗಿದೆ. ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘವು ಸಹಕಾರ ತತ್ವದಂತೆ ಮುನ್ನಡೆಯುತ್ತಿದ್ದು, ಈಗ ಇತರೆ ಸಂಘಗಳಂತೆ ಅಗತ್ಯ ಸೌಲಭ್ಯ ಹೊಂದಬೇಕು’ ಎಂದು ಶಾಸಕರು ಹೇಳಿದರು.

‘ತಂದೆ ಎಚ್.ಎಸ್.ಮಹದೇವಪ್ರಸಾದ್ ಸಹಕಾರ ಸಚಿವರಾಗಿ ಸಹಕಾರ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತಂದರು. ಇದೇ ಕಾರಣಕ್ಕೆ ರಾಜ್ಯವ್ಯಾಪಿ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.

ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್, ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಶೀಲಾ ಪುಟ್ಟರಂಗಶೆಟ್ಟಿ, ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ಪ್ರಭಾರ ವ್ಯವಸ್ಥಾಪಕ ಶರತ್ಕುಮಾರ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಚಂದ್ರಶೇಖರ್, ವಿಸ್ತರಣಾಧಿಕಾರಿ ಸಿದ್ದಲಿಂಗೇಶ್ ಕೋರಿ, ಎಚ್.ಪ್ರಕಾಶ್, ಬಿ.ಮುದ್ದಪ್ಪ, ರಂಜಿತ, ಉದಯಕುಮಾರ್, ಮಂಜೇಶ್ ಕುಮಾರ್, ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಸಿಇಒ ಮಾರಶೆಟ್ಟಿ, ನೌಕರರು, ಗ್ರಾಮದ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.