ಗುಂಡ್ಲುಪೇಟೆ: ಗಣಿಯಲ್ಲಿ ಗುಡ್ಡಕುಸಿತ, 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಆರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಕೀಂ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ ಎನ್ನಲಾಗಿದೆ.
ಆರು ಟಿಪ್ಪರ್ ಗಳಿಗೆ ಹಾನಿಯಾಗಿದೆ. ಗಣಿ ಕಾರ್ಮಿಕರು ಹಾಗೂ ಟಿಪ್ಪರ್ ಚಾಲಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.