ಗುಂಡ್ಲುಪೇಟೆ: ಪಟ್ಟಣದ ಬಸ್ ನಿಲ್ದಾಣದಲ್ಲಿ ಪುಂಡರು ಮತ್ತು ದ್ವಿಚಕ್ರ ವಾಹನ ಸವಾರರ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

‘ತಾಲ್ಲೂಕಿನ ಎಲ್ಲಾ ಗ್ರಾಮಗಳಿಂದಲೂ ವಿದ್ಯಾರ್ಥಿಗಳು ಶಾಲೆ–ಕಾಲೇಜಿಗೆ ಹೋಗಲು ಬರುತ್ತಾರೆ. ವಿದ್ಯಾರ್ಥಿಗಳು ಬರುವ ಮತ್ತು ವಾಪಸಾಗುವ ವೇಳೆ ಬಸ್ ನಿಲ್ದಾಣದಲ್ಲಿ ಪುಂಡರು ಅನಗತ್ಯವಾಗಿ ಓಡಾಡುತ್ತಾ ತೊಂದರೆ ಕೊಡುತ್ತಾರೆ. ಬೈಕ್ಗಳಲ್ಲಿ ಬಸ್ ನಿಲ್ದಾಣದಲ್ಲಿ ಸುತ್ತಾಡುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗುತ್ತಿದ್ದು, ಪುಂಡರು ಮತ್ತು ದ್ವಿಚಕ್ರ ವಾಹನ ಸವಾರರಿಂದ ಆಗುತ್ತಿರುವ ತೊಂದರೆ ತಪ್ಪಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾಪತಿ ಮನವಿ ಮಾಡಿದರು.

ಗುಂಡ್ಲುಪೇಟೆ ಡಿಪೊ ವ್ಯವಸ್ಥಾಪಕ ಕುಮಾರ್ನಾಯಕ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸದಸ್ಯರಾದ ಚಿಕ್ಕರಾಜು, ಮಹೇಶ್, ಕುಮಾರಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.