ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಟೋಕನ್ ನೀಡುವವರು ಸಾರ್ವಜನಿಕರೊಂದಿಗೆ ಸರಿಯಾಗಿ ವರ್ತಿಸುವುದಿಲ್ಲ ಹಾಗೂ ಸಮರ್ಪಕ ಚಿಕಿತ್ಸೆ ಸಿಗದೆ ರೋಗಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ಗಮನಹರಿಸಿ’ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾ ಭವನದಲ್ಲಿ ಮಂಗಳವಾರ ನಡೆದ 2025-26ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪಗ್ರತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಜೆ ಮತ್ತು ರಾತ್ರಿ ವೇಳೆ ವೈದ್ಯರು ಇರುವುದಿಲ್ಲ ಎಂದು ಆರೋಪವಿದ್ದು, ಸಂಜೆ 6ರಿಂದ 10ರವರೆಗೆ ವೈದ್ಯರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಕೆಲ ದಿನಗಳಿಂದ ಶೀತದ ವಾತಾವರಣ ನಿರ್ಮಾಣವಾಗಿದ್ದು, ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು’ ಎಂದು ತಾಕೀತು ಮಾಡಿದರು.

‘ತಾಲ್ಲೂಕಿನಲ್ಲಿ ಸಂಭವಿಸುವ ಅಪಘಾತ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಮರಣೋತ್ತರ ಪರೀಕ್ಷೆಗೆ ದೇಹವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗುತ್ತಿದ್ದು, ತಾಲ್ಲೂಕು ಆಸ್ಪತ್ರೆಯಲ್ಲೇ ಮಾಡಲು ಕ್ರಮ ವಹಿಸಬೇಕು. ಜೊತೆಗೆ ಶವಾಗಾರ ನಿರ್ಮಾಣದ ಕುರಿತು ಮಾಹಿತಿ ನೀಡಿ, ಅನುದಾನ ಕೊಡಿಸಲು ಮುಂದಾಗುತ್ತೇನೆ’ ಎಂದು ಶಾಸಕರು ತಿಳಿಸಿದರು.

ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅಲೀಂ ಪಾಷ ಮಾತನಾಡಿ, ‘ಕಬ್ಬಹಳ್ಳಿ ಮತ್ತು ಬೇಗೂರು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಕಬ್ಬಹಳ್ಳಿ ಆಸ್ಪತ್ರೆಯಲ್ಲಿ 10 ವರ್ಷಗಳಿಂದ ಒಂದೇ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಡಾ.ವೆಂಕಟಸ್ವಾಮಿ ಜಿಲ್ಲಾ ಆಸ್ಪತ್ರೆಗೆ ವರ್ಗಾವಣೆಗೊಂಡಿದ್ದರಿಂದ ತಾತ್ಕಾಲಿಕವಾಗಿ ಬೇರೆ ವೈದ್ಯರನ್ನು ಅಲ್ಲಿಗೆ ನಿಯೋಜನೆ ಮಾಡಿ, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಸರ್ಕಾರ ವೈದ್ಯರನ್ನು ನೇಮಕ ಮಾಡುವ ನಿರೀಕ್ಷೆ ಇದೆ ಎಂದರು.

ತಾಲೂಕಿನ ಬನ್ನಿತಾಳಪುರ ಮತ್ತು ಭೀಮನಬೀಡು ಶಾಲೆಗಳನ್ನು ಕೆಪಿಎಸ್ ಮೇಲ್ದರ್ಜೆಗೆ ಏರಿಸಲಾಗುವುದು. ಕೇಂದ್ರೀಯ ಮಾದರಿ ಶಾಲೆ ಆರಂಭವಾದಾಗ ಕಡಿಮೆ ಸಂಖ್ಯೆ ಇರುವ 44 ಶಾಲೆಯ ವಿದ್ಯಾರ್ಥಿಗಳನ್ನು ಸೇರಿಸಲು ಈಗಾಗಲೇ ಮ್ಯಾಪಿಂಗ್ ಮಾಡಲಾಗಿದೆ. ಹುಲ್ಲೇಪುರ, ಕಲ್ಲಿಗೌಡನಹಳ್ಳಿ ಶಾಲೆಯನ್ನು ಸೇರಿಸಿ ಶಿವಪುರ ಶಾಲೆಯನ್ನು ಕೇಂದ್ರ ಸ್ಥಾನವನ್ನಾಗಿ ಮಾಡಲಾಗುತ್ತದೆ. ಕೊರತೆ ಇರುವ ಶಿಕ್ಷಕ ಅತಿಥಿ ಶಿಕ್ಷಕರನ್ನು ಹಾಕಿ ಸರಿದೂಗಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ ಮಾಹಿತಿ ನೀಡಿದರು.

‘ಶಾಲೆ ಕಟ್ಟಡ ದುರಸ್ತಿ, ಕಾಂಪೌಂಡ್ ಸೇರಿದಂತೆ ಇನ್ನಿತರ ಮೂಲ ಸೌಲಭ್ಯಗಳನ್ನು ಪಟ್ಟಿ ಮಾಡಿ ಮಾಹಿತಿ ನೀಡಿದರೆ ಅನುದಾನ ನೀಡುತ್ತೇನೆ’ ಎಂದು ಗಣೇಶಪ್ರಸಾದ್ ಭರವಸೆ ನೀಡಿದರು.

‘ಬೆಟ್ಟದಮಾದಹಳ್ಳಿ, ರಂಗೂಪುರ, ಹೊಸಪುರ ಗ್ರಾಮಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಕೊರತೆ. ಆದಿವಾಸಿಗಳ ಕರಕುಶಲ ಮಳಿಗೆ ನಿರ್ಮಾಣಕ್ಕೆ ಮೇಲುಕಾಮನಹಳ್ಳಿ ಬಳಿ ಒಂದು ಎಕರೆ ಜಾಗ ಅವಶ್ಯಕತೆ ಇದ್ದು, ಕೊಡಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಮೋಹನ್ ಕುಮಾರ್ ಮನವಿ ಮಾಡಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ ರಸ್ತೆ ನಿರ್ಮಾಣವಾಗಿದ್ದು, ಇನ್ನೂ ಹಲವು ಗ್ರಾಮಗಳಿಗೆ ಸಿಸಿ ರಸ್ತೆ ನಿರ್ಮಾಣ ಮಾಡುವಂತೆ ಬೇಡಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ರಸ್ತೆ ನಿರ್ಮಾಣ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಕೆ.ಎಸ್.ಆರ್.ಟಿ.ಸಿ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನಿಗದಿತ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿಪೆÇೀ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ತನ್ಮಯ್, ತಾಪಂ ಇಓ ಷಣ್ಮುಗಂ, ಪುರಸಭೆ ಮುಖ್ಯ ಆಧಿ ಕಾರಿ ಶರವಣ, ಎಪಿಎಂಸಿ ಅಧ್ಯಕ್ಷ ರಂಗೂಪುರ ನಾಗರಾಜು, ಟಿಎಪಿಸಿಎಂಸಿ ಅಧ್ಯಕ್ಷ ಮಡಿವಾಳಪ್ಪ ಸೇರಿದಂತೆ ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ರೈತರಿಗೆ ಸಾಗುವಳಿ ನೀಡಲು ಅರಣ್ಯ ಮತ್ತು ಕಂದಾಯ ಇಲಾಖೆಗಳು ಜಂಟಿಯಾಗಿ ಸರ್ವೇ ಕಾರ್ಯಕ್ಕೆ ಸೂಚಿಸಿದ್ದು ವರದಿ ಬಂದ ನಂತರ ರೈತರಿಗೆ ನಿರಪೇಕ್ಷಣಾ ಪತ್ರ ನೀಡಲು ಕ್ರಮ ವಹಿಸಲಾಗುವುದು
ಗಣೇಶಪ್ರಸಾದ್, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.