ಗುಂಡ್ಲುಪೇಟೆ: ಬುಧವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಬಾಳೆ ಗಿಡಗಳು ನೆಲಕಚ್ಚಿವೆ. ಸುಮಾರು 10 ಎಕರೆಗೂ ಅಧಿಕ ಫಸಲು ನಾಶವಾಗಿರುವ ಘಟನೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರೈತರಾದ ಬೊಮ್ಮಲಾಪುರ ಗ್ರಾಮದ ರಾಜಪ್ಪ, ಬಸವರಾಜು, ಗುರುಸ್ವಾಮಿ, ರವಿ, ನಾಗೇಂದ್ರ ಎಂಬುವರು ಬೆಳೆದಿದ್ದ ಫಸಲು ನಾಶವಾಗಿದೆ. ಸುಮಾರು 3 ಸಾವಿರ ಗಿಡಗಳು ನೆಲಕಚ್ಚಿರಬಹುದು ಎಂದು ಅಂದಾಜಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಹಾನಿ ಸಂಭವಿಸಿದೆ.

ಸಾಲ ಮಾಡಿ ಬಾಳೆ ಫಸಲು ಬೆಳೆದಿದ್ದೆವು. ಇನ್ನೇನು ಬೆಳೆ ಕೈಗೆ ಬರಬೇಕಿತ್ತು. ಅಷ್ಟರಲ್ಲೇ ಪ್ರಕೃತಿ ಮುನಿದು ಎಲ್ಲವನ್ನೂ ಮಣ್ಣುಪಾಲು ಮಾಡಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸಂತ್ರಸ್ತ ರೈತ ರಾಜಪ್ಪ ಮನವಿ ಮಾಡಿದ್ದಾರೆ.

ಸೂಕ್ತ ಪರಿಹಾರಕ್ಕೆ ಒತ್ತಾಯ: ಬೊಮ್ಮಲಾಪುರ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಬಾಳೆ ಬೆಳೆಗಾರರು ತತ್ತರಿಸಿ ಹೋಗಿದ್ದಾರೆ. ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಬೆಳೆ ಹಾನಿಯ ವರದಿ ಸಿದ್ಧಪಡಿಸಿ ಶೀಘ್ರವಾಗಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-37-1016822351

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.