ಗುಂಡ್ಲುಪೇಟೆ: ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು ರಸ್ತೆಯ ಮಧ್ಯೆಯೇ ಮಲಗುತ್ತಿರುವ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು ಅಪಘಾತಗಳಿಗೂ ಕಾರಣವಾಗುತ್ತಿದೆ.

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಗೆ ಸಂಪರ್ಕ ಕಲ್ಲಿಸುವ ಹೆದ್ದಾರಿ ಹಾದುಹೋಗಿದ್ದು ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ವಾಹನಗಳು ಉಭಯ ರಾಜ್ಯಗಳಿಗೆ ಹಾದುಹೋಗುತ್ತವೆ. ತರಕಾರಿ ಸಹಿತ ಆಹಾರ ಪದಾರ್ಥಗಳನ್ನು ಹೊತ್ತು ಹೋಗುವ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ.

ಸದಾ ದಟ್ಟಣೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಡಾಡಿ ದನಗಳು ಮಲಗುತ್ತಿದ್ದು ಸುಗಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಾತ್ರಿಯ ಹೊತ್ತು ವಾಹನಗಳು ಜಾನುವಾರುಗಳಿಗೆ ಡಿಕ್ಕಿ ಹೊಡೆದು ಅಪಘಾತಗಳಿಗೆ ತುತ್ತಾಗುತ್ತಿವೆ. ಜಾನುವಾರುಗಳ ಪ್ರಾಣಕ್ಕೂ ಸಂಚಕಾರ ಎದುರಾಗುತ್ತಿದೆ.

ರಾತ್ರಿಯ ಹೊತ್ತು ಎದುರು ಬದರು ಬರುವ ವಾಹನಗಳು ಚೆಲ್ಲುವ ಪ್ರಖರ ಬೆಳಕಿನಿಂದ ರಸ್ತೆ ಕಾಣದೆ ಹೆದ್ದಾರಿಯಲ್ಲಿ ಮಲಗಿರುವ ಜಾನುವಾರುಗಳಿಗೆ ಸವಾರರು ಗುದ್ದುತ್ತಿದ್ದು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದಾರೆ. ಪಟ್ಟಣದೊಳಗೆ ಹಾದುಹೋಗಿರುವ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಕಿರಿಕಿರಿ ಮಿತಿಮೀರಿದ್ದರೂ ಪುರಸಭೆ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಳಿಗ್ಗೆ ಹಾಗೂ ಸಂಜೆಯ ಸಮಯ ತಂಪಾದ ವಾತಾವರಣ ಇರುವುದರಿಂದ ದನಗಳು ರಸ್ತೆಯ ಮಧ್ಯೆ ಮಲಗುತ್ತವೆ. ರಸ್ತೆಯಿಂದ ಅವುಗಳನ್ನು ಓಡಿಸಿದರೂ ಮತ್ತೆ ಬಂದು ಮಲಗುತ್ತಿವೆ. ಜಾನುವಾರುಗಳ ಮಾಲೀಕರು ದನಗಳನ್ನು ಬೀದಿಗೆ ಬಿಟ್ಟು ತಲೆ ಕೆಡಿಸಿಕೊಳ್ಳುವುದಿಲ್ಲ. ಪರಿಣಾಮ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕುವಂತಗಿದೆ ಎನ್ನುತ್ತಾರೆ ಸ್ಥಳೀಯ ಪ್ರಕಾಶ್.

ರಾತ್ರಿ ವೇಳೆ ಅವಘಡ: ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ 9ರ ನಂತರ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಈ ಹೊತ್ತಿನಲ್ಲಿ ಅಂತರ ರಾಜ್ಯಗಳಿಗೆ ತೆರಳುವ ವಾಹನಗಳು ಅತಿಯಾದ ವೇಗದಲ್ಲಿ ತೆರಳುತ್ತವೆ. ಈ ಸಂದರ್ಭ ಬಿಡಾಡಿ ದನಗಳು ರಸ್ತೆ ಮಧ್ಯೆ ನಿಲ್ಲುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ.

ಬಿಡಾಡಿ ದನಗಳ ಸ್ಥಳಾಂತರಕ್ಕೆ ಒತ್ತಾಯ:

ಬೆಳಿಗ್ಗೆ ಮತ್ತು ರಾತ್ರಿ ಸಮಯ ಹೆಚ್ಚಾಗಿ ಬಿಡಾಡಿ ದನಗಳ ಹೆದ್ದಾರಿಯಲ್ಲಿ ಬಂದು ನಿಲ್ಲುತ್ತಿದ್ದು ಪುರಸಭೆ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಹಾಕಬೇಕು, ಅವುಗಳ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಪಟ್ಟಣದ ನಿವಾಸಿ ಸಾಹುಲ್ ಹಮೀದ್ ಒತ್ತಾಯಿಸುತ್ತಾರೆ.

ಬಿಡಾಡಿ ದನಗಳಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು ದನಗಳನ್ನು ರಸ್ತೆಗೆ ಬಿಡದಂತೆ ಮಾಲೀಕರಿಗೆ ಸೂಚಿಸಲಾಗಿದೆ. ಬಿಟ್ಟರೆ ಪಿಂಜರಪೋಲ್ಗೆ ಕಳುಹಿಸಲಾಗುವುದು.
–ವಸಂತಕುಮಾರಿ ಪುರಸಭೆ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.