ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ | ಕುಸಿದು ಬಿದ್ದ ವಿದ್ಯಾರ್ಥಿನಿ ಸಾವಿಗೆ ಹೃದಯಾಘಾತ ಕಾರಣ

Published 9 ಆಗಸ್ಟ್ 2023, 12:36 IST
Last Updated 9 ಆಗಸ್ಟ್ 2023, 12:36 IST
ಅಕ್ಷರ ಗಾತ್ರ

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಿಗ್ಗೆ  ವಾಯುವಿಹಾರ ಮಾಡುತ್ತಿದ್ದಾಗ ಶಾಲಾ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿದ್ದಾಳೆ. 

ಪಟ್ಟಣದ ನಿರ್ಮಲ ಕಾನ್ವೆಂಟ್‌ನಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ (15) ಮೃತಪಟ್ಟ ವಿದ್ಯಾರ್ಥಿನಿ. 

ಸಿಎಂಎಸ್ ಅನಾಥಾಲಯದಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆಗೆ ನಡೆಸಿದಾಗಲೇ ಆಕೆ ಕೊನೆಯುಸಿರೆಳೆದಿದ್ದಳು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ಫಿಲಿಶ ಬೆಂಗಳೂರಿನ ನಿವಾಸಿಯಾಗಿದ್ದು, ಆಕೆಯ ತಂದೆ ಐದಾರು ವರ್ಷಗಳಿಂದ ವ್ಯಾಸಂಗಕ್ಕಾಗಿ ಪಟ್ಟಣದ ಸಿಎಂಎಸ್ ಅನಾಥಾಲಯಕ್ಕೆ ತಂದು ಬಿಟ್ಟಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ.

‘ಬಾಲಕಿ ಆರೋಗ್ಯವಾಗಿದ್ದಳು. ಧಿಡೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ‌’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT