ಗುಂಡ್ಲುಪೇಟೆ: ತಾಲ್ಲೂಕಿನ ದೊಡ್ಡತುಪ್ಪೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಕಲಾ ಸಂಘ ಉದ್ಘಾಟನೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ 135ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಗ್ರಾಮದ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಕಲಾ ಸಂಘದ ಅಧ್ಯಕ್ಷ ಶಿವಮಲ್ಲು ಮಾತನಾಡಿ, ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸುವಂತಾಗಬೇಖು. ಅವರ ಆದರ್ಶ ಕೇಳಿಸಿಕೊಂಡರೆ ಸಾಲದು, ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಸಲಹೆ ನೀಡಿದರು.

ಸಾಮಾಜಿಕ ಸಮಾನತೆಗಾಗಿ ಹೋರಾಟ ಮಾಡಿದ ಮಹಾ ಪುರುಷ ಅಂಬೇಡ್ಕರ್. ದೇಶದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆ ವಿರುದ್ಧ ದನಿ ಎತ್ತಿ, ಶೋಷಣೆ ಮತ್ತು ತುಳಿತಕ್ಕೊಳಗಾದವರಿಗೆ ಮೀಸಲಾತಿಯನ್ನು ಕಲ್ಪಿಸುವ ಮೂಲಕ ಸಮಾನತೆಯನ್ನು ಸಾರಿದರು. ಅವರು ನೀಡಿರುವ ಮೀಸಲಾತಿಯ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಕಲಾ ಸಂಘದ ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-37-1365607429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.