ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶ ಓಂಕಾರ ವಲಯದ ಮಂಚಹಳ್ಳಿ ವ್ಯಾಪ್ತಿಯಲ್ಲಿ ಆನೆಗಳ ದಾಳಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಬೇಕು ಎಂದು ಗಡಿನಾಡು ರಕ್ಷಣಾ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲ್ ರಷೀದ್ ಒತ್ತಾಯಿಸಿದರು.

ಓಂಕಾರ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿದೆ. ಆದರೆ ಸಕಾಲದಲ್ಲಿ ಪರಿಹಾರ ನೀಡಿ ರೈತನಿಗೆ ಬೆಂಬಲವಾಗಿ ನಿಲ್ಲಲು ಅರಣ್ಯ ಇಲಾಖೆ, ಚುನಾಯಿತ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಬೆಳೆ ನಷ್ಟ ಅನುಭವಿಸಿದ ರೈತ ಪರಿಹಾರಕ್ಕಾಗಿ ವರ್ಷಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಕಾಡಾನೆ ದಾಳಿಯಿಂದ ಟೊಮೆಟೊ, ಬಾಳೆ, ತೆಂಗಿನ ಸಸಿ, ಬೀನ್ಸ್, ಸೋಲಾರ್ ತಂತಿ ನಾಶವಾಗಿರುವ ನೂರಾರು ವರದಿಗಳಿದ್ದರೂ ಅವುಗಳ ಉಪಟಳಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಮುಂದಾಗಿಲ್ಲ. ಬೆಳೆ ರಕ್ಷಣೆಗೆ ಜಮೀನಿನ ಸುತ್ತಲೂ ಸೋಲಾರ್ ತಂತಿ ಬೇಲಿ ನಿರ್ಮಾಣ ಮಾಡಿದ್ದರೂ ತುಳಿದು ಒಳನುಗ್ಗುವ ಕಾಡಾನೆಗಳು ರೈತಾಪಿ ವರ್ಗಕ್ಕೆ ಲಕ್ಷಾಂತರ ರೂಪಾಯಿ ನಷ್ಟದ ಬರೆ ಎಳೆಯುತ್ತಿವೆ. ಮಂಚಹಳ್ಳಿ ಹಾಗೂ ಸುತ್ತಲಿನ ಗ್ರಾಮದ ರೈತರು ಅನೇಕ ಬಾರಿ ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ಕಾಡಾನೆಗಳ ದಾಂದಲೆ, ಬೆಳೆ ನಷ್ಟದ ಕುರಿತು ಮಾಹಿತಿ ನೀಡುವ ಮೂಲಕ ಆನೆ ಉಪಟಳದಿಂದ ತಪ್ಪಿಸುವಂತೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಗಸ್ತು ತಿರುಗದ ಅರಣ್ಯ ಸಿಬ್ಬಂದಿ: ಓಂಕಾರ ವಲಯದಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದರು ಸಹ ಅರಣ್ಯ ಸಿಬ್ಬಂದಿ ಸಮರ್ಪಕವಾಗಿ ಗಸ್ತಿ ತಿರುಗುತ್ತಿಲ್ಲ. ಜೊತೆಗೆ ರಾತ್ರಿ ವೇಳೆ ಕಾಡಂಚಿನ ರೈತರ ಪೋನ್ ಕರೆ ಸ್ವೀಕರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-37-351533250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.